Advertisement

ಪಾರಂಪರಿಕ ಶ್ರೀಮಂತಿಕೆ ಮುನ್ನಡೆಸೋಣ

12:31 PM Aug 16, 2018 | Team Udayavani |

ಬೀದರ: ಬೀದರ ಜಿಲ್ಲೆಯು ಪಾರಂಪರಿಕ ಶ್ರೀಮಂತಿಕೆ ಹೊಂದಿದ ಪ್ರದೇಶವಾಗಿದ್ದು, ಇದನ್ನು ಮುನ್ನಡೆಸಿಕೊಂಡು ಹೋಗಬೇಕಾಗಿದ್ದು, ಸ್ಥಗಿತಗೊಂಡ ಬೀದರ ಉತ್ಸವವನ್ನು ಮತ್ತೆ ಆರಂಭಿಸಲಾಗುತ್ತದೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪಾ ಖಾಶೆಂಪೂರ ಹೇಳಿದರು.

Advertisement

ನಗರದ ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 72ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ಇಲ್ಲಿನ ಯುವ ಜನತೆಯನ್ನು 21 ಶತಮಾನಕ್ಕೆ ಅಣಿಗೊಳಿಸಬೇಕಾಗಿದೆ ಎಂದರು.

ರಾಜ್ಯದ ಸಮ್ಮಿಶ್ರ ಸರ್ಕಾರ ನಾಡಿನ ರೈತರ ಸಂಕಷ್ಟ ಅರಿತು ಬೆಳೆ ಸಾಲ ಮನ್ನಾ ಮಾಡಿದ್ದು, ಇದರಿಂದ ರಾಜ್ಯದ 20.38ಲಕ್ಷ ರೈತರಿಗೆ ಲಾಭವಾಗಲಿದೆ. ಸಹಕಾರ ಕ್ಷೇತ್ರದಲ್ಲಿ ತೆಗೆದುಕೊಂಡ 1ಲಕ್ಷ ರೂ. ವರೆಗಿನ ಚಾಲ್ತಿ ಸಾಲ ಮನ್ನಾ ಮಾಡಲಾಗಿದೆ. ಅಲ್ಲದೇ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 2 ಲಕ್ಷ ರೂ.ವರೆಗಿನ ಸಾಲ ಕೂಡ ಮನ್ನಾ ಮಾಡಲು ಚಿಂತನೆ ನಡೆದಿದೆ. ಒಟ್ಟು ಸಾಲಮನ್ನಾಕ್ಕಾಗಿ 50 ಸಾವಿರ ಕೋಟಿ ರೂ. ಸರ್ಕಾರಕ್ಕೆ ಹೊರೆಯಾಗುತ್ತಿದೆ. ಸಾಲ ಮನ್ನಾದಿಂದ 1.02 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ
ಎಂದರು.

ಜಿಲ್ಲೆಯಲ್ಲಿ ನಾಗರಿಕ ವಿಮಾನ ಹಾರಾಟಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬರುವ 3 ತಿಂಗಳಲ್ಲಿ ನಾಗರಿಕ ವಿಮಾನ ಹಾರಾಟ ಆರಂಭಿಸಲಾಗುತ್ತದೆ. ಜಿಲ್ಲೆಯ ಯುವ ಜನತೆಗೆ ಉದ್ಯೋಗ ಒದಗಿಸುವುದಕ್ಕಾಗಿ ಕೈಗಾರಿಕೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ವಿಶೇಷವಾಗಿ ಕೃಷಿ ಉತ್ಪನ್ನ ಸಲಕರಣೆಗಳ ತಯಾರಿಕಾ ಘಟಕ ಆರಂಭಿಸಲಾಗುತ್ತದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗಲಿವೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದರು.

ಸ್ವಾತಂತ್ರ್ಯಾ ನಂತರದ 70 ವರ್ಷಗಳ ಬಳಿಕವೂ ದೇಶದಲ್ಲಿ ಹಲವು ಸಮಸ್ಯೆಗಳು ಹಾಗೇ ಇವೆ. ಸಾಕಷ್ಟು ಸಾಧನೆಗಳು
ನಡೆಯುತ್ತಿದ್ದರೂ ಸಮಸ್ಯೆಗಳು- ಸವಾಲುಗಳು ಇದ್ದೇ ಇವೆ. ಅನಕ್ಷರತೆ, ಬಡತನ, ಅನಾರೋಗ್ಯ, ಹಸಿವು, ನಿರುದ್ಯೋಗ ಸಮಸ್ಯೆಗಳು ದೇಶವನ್ನು ಎಡೆಬಿಡದೇ ಕಾಡುತ್ತಿವೆ. ಇವುಗಳನೆಲ್ಲಾ ಮೆಟ್ಟಿ ದೇಶವನ್ನು ಮುನ್ನಡೆಸಬೇಕಾದ ಜವಾಬ್ದಾರಿ ಪ್ರತಿ ನಾಗರಿಕರಾದಾಗಿದೆ ಎಂದು ಹೇಳಿದರು.

Advertisement

ಇದಕ್ಕೂ ಮುನ್ನ ಪೊಲೀಸ್‌ ತುಕಡಿಗಳಿಂದ ಪಥ ಸಂಚಲನ ಜರುಗಿತು. ಬಳಿಕ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಸಕ ರಹೀಂ ಖಾನ್‌ ಅಧ್ಯಕ್ಷತೆ ವಹಿಸಿದ್ದರು. ಸಂಸದ ಭಗವಂತ್‌ ಖೂಬಾ, ನಗರ ಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ, ಶಾಸಕರಾದ ರಘುನಾಥ ಮಲ್ಕಾಪೂರೆ, ಅರವಿಂದಕುಮಾರ್‌ ಅರಳಿ, ವಿಜಯಸಿಂಗ್‌, ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.
ಮಹಾದೇವ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ, ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷ ಪ್ರಕಾಶ ಪಾಟೀಲ, ಜಿಲ್ಲಾ ಪಂಚಾಯತ ಸಿಇಒ ಡಾ| ಆರ್‌.ಸೆಲ್ವಮಣಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಸಹಾಯಕ ಆಯುಕ್ತ ಶಿವಕುಮಾರ ಶೀಲವಂತ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಜರಿದರು.

Advertisement

Udayavani is now on Telegram. Click here to join our channel and stay updated with the latest news.

Next