Advertisement

ಬಾಲ ಕಾರ್ಮಿಕ ಪದ್ದತಿ ತಡೆಗೆ ಯತ್ನಿಸೋಣ

02:28 PM Jul 11, 2022 | Team Udayavani |

ಶಹಾಬಾದ: ತಾಲೂಕಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ, ಮಾರ್ಗದರ್ಶಿ ಸಂಸ್ಥೆ, ಸಹರಾ ಸಂಸ್ಥೆ, ಮಕ್ಕಳ ಸಹಾಯವಾಣಿ- 1098 ಕಲಬುರಗಿ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ  ದಿನಾಚರಣೆ ಅಂಗವಾಗಿ ಜಾಥಾ ಮತ್ತು ಮಕ್ಕಳು ಮತ್ತು ಪೋಷಕರಿಗೆ ಶಿಕ್ಷಣದ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

ಇದೆ ವೇಳೆ ತಹಶೀಲ್ದಾರ್‌ ಸುರೇಶ ವರ್ಮಾ ಮಾತನಾಡಿ, ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಲು ಹಾಗೂ ನಿರ್ಮೂಲನೆಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಹದಿನಾಲ್ಕು ವರ್ಷದೊಳಗಿನ ಶಾಲೆಯಿಂದ ಹೊರಗಡೆ ಇರುವ ಯಾವುದೇ ಮಗು ಕಂಡುಬಂದರೆ, ಅವರ ಪೋಷಕರಿಗೆ ತಿಳಿವಳಿಕೆ ಹೇಳಿ ಎಂದರು.

ವಿದ್ಯಾರ್ಥಿಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸಿಡಿಪಿಒ ಬಿ.ಎಸ್‌.ಹೊಸಮನಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಚಿತ್ತಾಪುರ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಶಿವರಾಜ ಪಾಟೀಲ, ಆಸ್ಪಲ್ಲಿ ಶಾಲೆ ಮುಖ್ಯಶಿಕ್ಷಕಿ ಶೋಭಾ ಅರಳಿ, ಶಿಕ್ಷಕರಾದ ಸಂದುಲಾಲ ಬಸೂದೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next