Advertisement

ಸ್ವತ್ಛತೆ ಕಡೆ ನಮ್ಮ ನಡೆ ಸಾಗಲಿ

02:41 PM Nov 20, 2018 | |

ಗೊರೇಬಾಳ: 2012ರ ಸಮೀಕ್ಷೆಯಂತೆ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಎಲ್ಲ ಕುಟುಂಬಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಪ್ರತಿಯೊಬ್ಬರು ಶೌಚಾಲಯ ಬಳಸುವ ಮೂಲಕ ಸ್ವತ್ಛತೆ ಕಡೆ ನಮ್ಮ ನಡೆ ಸಾಗಬೇಕಾಗಿದೆ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

Advertisement

ತಾಲೂಕಿನ ಗಾಂಧಿನಗರದ ಶಿವಾ ದೇವಾಲಯದ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶೌಚಾಲಯ ದಿನಾಚರಣೆ ಹಾಗೂ ರಾಯಚೂರು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಘೋಷಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2012ರ ಸಮೀಕ್ಷೆಯಂತೆ ಜಿಲ್ಲೆಯ ಎಲ್ಲ ಕುಟುಂಬಗಳಿಗೆ ಶೌಚಾಲಯ ನಿರ್ಮಿಸಲಾಗಿದೆ. 2018ಕ್ಕೆ ಹೊಸ ಕುಟುಂಬಗಳಿಗೆ ಇನ್ನೂ 16,900 ಶೌಚಾಲಯ ನಿರ್ಮಾಣ ಮಾಡಬೇಕಾಗಿದೆ. ಈ ಪ್ರಸ್ತಾವನೆ ಸರ್ಕಾರದ ಮುಂದಿದೆ. ಕೂಡಲೇ ಅನುಮೋದನೆ ನೀಡುವ ಮೂಲಕ ಸಂಪೂರ್ಣ ಬಹಿರ್ದೆಸೆ ಮುಕ್ತ ಮಾಡಲಾಗುವುದು. ಸರ್ಕಾರದಿಂದ ಶೌಚಾಲಯ ಕಟ್ಟಿಕೊಡಬಹುದು. ಆದರೆ ಗ್ರಾಮೀಣ ಭಾಗದ ಜನರು ಅವುಗಳನ್ನು ಬಳಸುವ ಮೂಲಕ ಪರಿಸರ, ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕು ಎಂದರು.

ಶೌಚಾಲಯ ಬಳಕೆ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗುವುದು. ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡುಬಹುದು. ಆದರೆ ಸಾರ್ವಜನಿಕರ ಸಹಕಾರವಿಲ್ಲದೇ ಯೋಜನೆಗಳು ಯಶಸ್ವಿ
ಕಾಣಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಕಸ ನಿರ್ವಹಣೆಗೆ ಸಂಬಂಧಿಸಿದಂತೆ ಯೋಜನೆಗಳನ್ನು ರೂಪಿಸಲಾಗುವುದು
ಎಂದು ಹೇಳಿದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ 179 ಗ್ರಾಮ ಪಂಚಾಯತಿಗಳಿವೆ. 980 ಗ್ರಾಮಗಳಿದ್ದು, 2012ರಲ್ಲಿ ಕೈಗೊಂಡ ಬೇಸ್‌ಲೈನ್‌ ಸಮೀಕ್ಷೆ ಪ್ರಕಾರ 2,54,759 ಕುಟುಂಬಗಳಿಗೆ ಶೌಚಾಲಯ ನಿರ್ಮಿಸಲಾಗಿದ್ದು, ರಾಯಚೂರನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ತುಂಬಾ ಖುಷಿಯಾಗುತ್ತದೆ ಎಂದರು.

Advertisement

ಜಿಲ್ಲಾಧಿಕಾರಿ ಬಿ.ಶರತ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಲಿನ್‌ ಅತುಲ್‌, ಎಸ್‌ಪಿ ಡಿ. ಕಿಶೋರಬಾಬು, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬಸನಗೌಡ ಕಂಬಳಿ, ಸದಸ್ಯ ಅಮರೇಗೌಡ ವಿರುಪಾಪುರ, ತಾಪಂ ಸದಸ್ಯೆ ಜಾಹೀದಾ ಬೇಗಂ, ಗಾಂಧಿ ನಗರ ಗ್ರಾಪಂ ಅಧ್ಯಕ್ಷೆ ಅಂಬಮ್ಮ ಸೇರಿದಂತೆ ವಿವಿಧ ತಾಲೂಕುಗಳ ತಾಪಂ ಕಾ.ನಿ. ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next