Advertisement

ಪ್ರಗತಿಯ ವೇಗ ಹೆಚ್ಚಿಸಲು ಗುರ್ಮೆ ಅವರನ್ನು ಗೆಲ್ಲಿಸೋಣ:ಕ್ಯಾ.ಗಣೇಶ್‌ ಕಾರ್ಣಿಕ್‌

03:09 PM May 07, 2023 | Team Udayavani |

ಪೆರ್ಡೂರು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜತೆಗೂಡಿ ಪೆರ್ಡೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಭರ್ಜರಿ ಮತಯಾಚನೆ ನಡೆಸಿದರು.

Advertisement

ಮಾಜಿ ವಿಧಾನ ಪರಿಷತ್‌ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್‌ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಉತ್ತಮ ಕೊಡುಗೆಯನ್ನು ನೀಡಿದೆ. ಬಿಜೆಪಿ ಸರಕಾರದಿಂದ ಭವಿಷ್ಯದಲ್ಲೂ ಮತ್ತಷ್ಟು ಅಭಿವೃದ್ಧಿ ಯೋಜನೆಗಳು ಅನುಷ್ಟಾನಗೊಳ್ಳಲಿವೆ. ಡಬಲ್‌ ಇಂಜಿನ್‌ ಸರಕಾರದ ವೇಗ ಹೆಚ್ಚಿಸಲು ಕಾಪು ಕ್ಷೇತ್ರದಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ ಅವರನ್ನು ಹೆಚ್ಚಿನ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಗುರ್ಮೆ ಗೆಲುವಿಗೆ ಜವಾಬ್ದಾರರಾಗೋಣ : ಲಾಲಾಜಿ ಆರ್‌. ಮೆಂಡನ್‌
ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿ, ನನ್ನ ಅಧಿಕಾರದ ಅವಧಿಯಲ್ಲಿ ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದೇನೆ. ಮುಂದೆ ಈ ಜವಾಬ್ದಾರಿಯನ್ನು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿಯವರು ಚೆನ್ನಾಗಿ ನಿಭಾಯಿಸಲಿದ್ದಾರೆ.

ಜೀವನದುದ್ದಕ್ಕೂ ಶೆ„ಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ಅದಕ್ಕೆ ಪೂರಕವಾಗಿ ಅವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊತ್ತುಕೋಳ್ಳಬೇಕಿದೆ ಎಂದರು.

ಕಾಪು ಕ್ಷೇತ್ರದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸುವೆ : ಗುರ್ಮೆ
ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಬಲ್‌ ಇಂಜಿನ್‌ ಬಿಜೆಪಿ ಸರಕಾರವು ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ನೀಡಿ ಅಭಿವೃದ್ಧಿ ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದಿದೆ. ಬಿಜೆಪಿ ಪಕ್ಷದ ಸಿದ್ಧಾಂತ, ರಾಷ್ಟ್ರಿಯವಾದ, ರಾಷ್ಟ್ರ ಪರ ಚಿಂತನೆಗಳು ಹಾಗೂ ಹಿರಿಯರು ಇಟ್ಟ ವಿಶ್ವಾಸಕ್ಕೆ ಯಾವುದೇ ರೀತಿಯ ಧಕ್ಕೆ ಬಾರದ ರೀತಿಯಲ್ಲಿ ನೋಡಿಕೊಂಡು ಕಾಪುವಿನ ಹೆಸರನ್ನು ಉಳಿಸುವ ಬೆಳೆಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.

Advertisement

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್‌, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್‌ ಪೆರ್ಣಂಕಿಲ, ಗೀತಾಂಜಲಿ ಎಂ. ಸುವರ್ಣ, ಚುನಾವಣಾ ಉಸ್ತುವಾರಿ ಸುಲೋಚನಾ ಭಟ್‌, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಮಹಿಳಾ ಮೋರ್ಚಾ ಕ್ಷೇತ್ರಾಧ್ಯಕ್ಷೆ ಸುಮಾ ಶೆಟ್ಟಿ, ಪೆರ್ಡೂರು ಗ್ರಾ.ಪಂ. ಅಧ್ಯಕ್ಷ ದೇವು ಪೂಜಾರಿ, ಬೆ„ರಂಪಳ್ಳಿ ಗ್ರಾ. ಪಂ. ಅಧ್ಯಕ್ಷ ಎಸ್‌. ಜಿಯಾನಂದ್‌ ಹೆಗ್ಡೆ, ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಮಣಿಪಾಲ್‌ ಟೆಕ್ನಾಲಜೀಸ್‌, ಶಿವಳ್ಳಿ ಕೈಗಾರಿಕಾ ವಲಯದಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ ಮತಯಾಚನೆ
ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರು ಶನಿವಾರ ಮಣಿಪಾಲ್‌ ಟೆಕ್ನಾಲಜೀಸ್‌ ಲಿಮಿಟೆಡ್‌ ಯೂನಿಟ್‌ 4 ಮತ್ತು ಕೈಗಾರಿಕಾ ಪ್ರದೇಶಗಳಲ್ಲಿರುವ ಮುದ್ರಣಾಲಯ ಸಹಿತ ವಿವಿಧ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ನನ್ನ ಧಾರ್ಮಿಕ, ಸಾಮಾಜಿಕ ಮತ್ತು ಶೆ„ಕ್ಷಣಿಕ ಸೇವಾ ಕಾರ್ಯಗಳನ್ನು ಗಮನಿಸಿ ಮತ್ತು ಪಕ್ಷದಲ್ಲಿ ನನ್ನ ಕೆಲಸವನ್ನು ನೋಡಿ ನನಗೆ ಈ ಜವಾಬ್ದಾರಿಯನ್ನು ಕೊಟ್ಟಿದೆ. ಕಾಪು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಗೊಳಿಸುವ ಕನಸು ನನ್ನಲ್ಲಿದ್ದು ಅದನ್ನು ಈಡೇರಿಸುವುದಕ್ಕಾಗಿ ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ, ಕಾಪು ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗುವಂತೆ ವಿನಂತಿಸಿದರು.

ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್‌, ಉದ್ಯಮಿ ದಿನೇಶ್‌, ಮಣಿಪಾಲ್‌ ಸಮೂಹ ಯುನಿಟ್‌ 4ರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಶ್ರೀನಿವಾಸ್‌ ರಾವ್‌, ಯುನಿಟ್‌ ಹೆಡ್‌ ಸತೀಶ್‌ ಪ್ರಭು, ಮಣಿಪಾಲ್‌ ಟೆಕ್ನಾಲಜೀಸ್‌ ಎವಿಪಿ ಪ್ರಸಾದ್‌, ಪಕ್ಷದ ಪ್ರಮುಖರಾದ ಸಂದೀಪ್‌ ಶೆಟ್ಟಿ, ಸಂತೋಷ್‌ ಬೊಳೆj, ಪ್ರವೀಣ್‌ ಪೂಆಜರಿ, ನಜೀರ್‌ ಶೇಖ್‌, ಹರೀಶ್‌ ಸಾಲ್ಯಾನ್‌ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next