Advertisement

ಉತ್ತರ ಕರ್ನಾಟಕ ರೈತರ ಬಗ್ಗೆ ಸಿಎಂ ಹೇಳಿಕೆ ವಾಪಸ್‌ ಪಡೆಯಲಿ:ರಾಯರೆಡ್ಡಿ

07:00 AM Jul 31, 2018 | |

ಬೆಂಗಳೂರು: ಉತ್ತರ ಕರ್ನಾಟಕ ರೈತರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದು ತಪ್ಪು. ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗ್ರಹಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗನ್ನು ಸರಿಪಡಿಸಲು ಆ ಭಾಗದ  ಶಾಸಕರಿಗೆ ಮಂತ್ರಿ ಮಂಡಲದಲ್ಲಿ ಸೂಕ್ತ ಸ್ಥಾನ ಹಾಗೂ ನಿಗಮ ಮಂಡಳಿ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು  ಒತ್ತಾಯಿಸಿದರು.

ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿ ಕಾಲ ಮಿತಿಯೊಳಗೆ ಯೋಜನೆ ಪೂರ್ಣಗೊಳಿಸುವುದು ಹಾಗೂ ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿಗೆ ಶಿಕ್ಷಣ, ವೈದ್ಯಕೀಯ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next