Advertisement

ರಜನಿ ಜತೆ ಕೆಲಸ ಮಾಡುವೆ

11:52 AM Aug 02, 2018 | Team Udayavani |

ಮುಂಬಯಿ:  ಮಕ್ಕಳ್‌ ನೀತಿ ಮಯ್ಯಂ ಸಂಸ್ಥಾಪಕ ಕಮಲ್‌ ಹಾಸನ್‌ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಜತೆಗೆ ರಾಜಕೀಯ ಕ್ಷೇತ್ರದಲ್ಲಿ ಒಟ್ಟಾಗಿ ಕೆಲಸ ಮಾಡುವ ಸಾಧ್ಯತೆ ತಳ್ಳಿ ಹಾಕಿಲ್ಲ. ಹಲವು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಇಬ್ಬರೂ ಭೇಟಿಯಾಗಿ ಅದರ ಬಗ್ಗೆ ಚರ್ಚೆ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ. ಜತೆಗೆ ಶೀಘ್ರದಲ್ಲೇ ಚರ್ಚಿಸಿ ನಿರ್ಧಾರ ಬಹಿರಂಗ ಮಾಡುತ್ತೇವೆ. ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸುತ್ತೇವೆ. ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತೇವೆ ಎಂದಿದ್ದಾರೆ. ಬಿಜೆಪಿ ಜತೆಗೆ ಸೇರುವ ಮತ್ತು ಅದಕ್ಕೆ ಬೆಂಬಲಿಸುವ ವರದಿಗಳನ್ನು ಕಮಲ್‌ ಪ್ರಶ್ನಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next