Advertisement

ನಿವೃತ್ತಿ ಬಳಿಕವೂ ಅಧಿಕಾರಿ ಮುಂದುವರಿಸಲು ದೇವೇಗೌಡರಿಂದ ಪತ್ರ: ಒಪ್ಪದ ಸರಕಾರ

12:50 AM Jun 02, 2022 | Team Udayavani |

ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ. ಜೈಪ್ರಕಾಶ್‌ ಅವರನ್ನು ನಿವೃತ್ತಿಯ ಬಳಿಕವೂ ಎರಡು ವರ್ಷ ಮುಂದುವರಿಸುವಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ಇದನ್ನು ಸಚಿವ ಸಂಪುಟ ಸಭೆಯಲ್ಲಿ ತಿರಸ್ಕರಿಸಲಾಗಿದೆ.

Advertisement

ಮೇ 16 ರಂದು ದೇವೇಗೌಡರು ಬರೆದಿದ್ದ ಪತ್ರಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳು ಈ ಕುರಿತು ಕಡತ ಮಂಡಿಸುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಗೆ ಸೂಚನೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಕಡತ ಮಂಡನೆಯಾಗಿದೆ ಎನ್ನಲಾಗಿದ್ದು, ಸಚಿವ ಸಂಪುಟವು ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ. ಜೈಪ್ರಕಾಶ್‌ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next