Advertisement

ಬೆಂಗಳೂರು ವಕೀಲರ ಸಂಘದಿಂದ ರಾಜ್ಯಪಾಲರಿಗೆ ಪತ್ರ

12:45 AM Jun 02, 2019 | Team Udayavani |

ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆ-ಬೆಂಗಳೂರು ಪ್ರವೇಶಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ದಿ ನ್ಯಾಷನಲ್‌ ಲಾ ಸ್ಕೂಲ್‌ ಇಂಡಿಯಾ ಯೂನಿವರ್ಸಿಟಿ (ತಿದ್ದುಪಡಿ) ಕಾಯ್ದೆ-2017ಕ್ಕೆ ಅನುಮೋದನೆ ನೀಡುವಂತೆ ಬೆಂಗಳೂರು ವಕೀಲರ ಸಂಘ ರಾಜ್ಯಪಾಲರಿಗೆ ಮನವಿ ಮಾಡಿದೆ.

Advertisement

ಈ ಕುರಿತು ರಾಜ್ಯಪಾಲರ ವಿ.ಆರ್‌.ವಾಲಾ ಅವರಿಗೆ ಪತ್ರ ಬರೆದಿರುವ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್‌, ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡುವಂತೆ 2018ರ ಮಾ.24ರಂದು ಮನವಿ ಸಲ್ಲಿಸಲಾಗಿತ್ತು. ಆದರೆ, ರಾಜಭವನದಿಂದ ಈವರೆಗೆ ಯಾವುದೇ ಉತ್ತರ ಬಂದಿಲ್ಲ. ಆದ್ದರಿಂದ ಆದಷ್ಟು ಬೇಗ ಕಾಯ್ದೆಗೆ ಅನುಮೋನದೆ ನೀಡುವಂತೆ ಮನವಿ ಮಾಡಿದ್ದಾರೆ.

ಬೇರೆ ರಾಜ್ಯಗಳಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಗಳಲ್ಲಿ ಪ್ರವೇಶಾತಿಯಲ್ಲಿ ಆಯಾ ರಾಜ್ಯದ ಸ್ಥಳೀಯರಿಗೆ ಶೇ.50ರಷ್ಟು ಮೀಸಲಾತಿ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಈ ಅವಕಾಶ ಇರಲ್ಲಿಲ್ಲ. ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಆರಂಭಗೊಳ್ಳಲಿಕ್ಕಿವೆ. ಆದ್ದರಿಂದ ತಿದ್ದುಪಡಿ ಕಾಯ್ದೆಗೆ ತುರ್ತಾಗಿ ಅನುಮೋದನೆ ನೀಡುವ ಅಗತ್ಯವಿದೆ ಎಂದು ಪತ್ರದಲ್ಲಿ ಮನವರಿಕೆ ಮಾಡಿಕೊಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next