Advertisement

ಮಾತೃ ಇಲಾಖೆಗೆ ಸಿಬ್ಬಂದಿ ವಾಪಸ್‌ ಕರೆಸಲು ಸಹಕಾರಿ ಸಚಿವರ ಪತ್ರ

11:13 AM May 25, 2020 | mahesh |

ಬೆಂಗಳೂರು: ಸಹಕಾರ ಇಲಾಖೆಗೆ ನೇಮಕಗೊಂಡು ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತೃ
ಇಲಾಖೆಗೆ ವಾಪಸ್‌ ಕರೆಸುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಹಕಾರಿ ಸಚಿವ ಎಸ್‌. ಟಿ.ಸೋಮಶೇಖರ್‌ ಪತ್ರ ಬರೆದಿದ್ದಾರೆ. ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದ ಹಿನ್ನೆಲೆಯಲ್ಲಿ “ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಯನ್ನು ಮರಳಿ ಮಾತೃ ಸಂಸ್ಥೆಗೆ’ ಎಂಬ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದಾರೆ.

Advertisement

ಸಹಕಾರ ಇಲಾಖೆಯಲ್ಲಿ ಸಾಕಷ್ಟು ಕೆಲಸ ಬಾಕಿ ಉಳಿಯುತ್ತಿದ್ದು, ಬ್ಯಾಂಕ್‌ಗಳಲ್ಲಿ ಸಾಲ ವಸೂಲಾತಿಯ ಸಮಸ್ಯೆಯಾಗುತ್ತಿದೆ. ಜತೆಗೆ ಸಮಯಕ್ಕೆ ಸರಿಯಾಗಿ ಕೆಲಸವನ್ನು ಪೂರ್ತಿಗೊಳಿಸಲು ಆಗುತ್ತಿಲ್ಲ. ಹೀಗಾಗಿ ಹಾಕಿಕೊಂಡ ಗುರಿ ಮುಟ್ಟಲೂ ಸಮಸ್ಯೆಯಾಗುತ್ತಿರುವುದರಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದವರ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸೋಮಶೇಖರ್‌, ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆಯಲ್ಲಿ ಸಿಬ್ಬಂದಿ ನಿಯೋಜನೆ ಮೇಲೆ ಬೇರೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿರುವುದರಿಂದ ಅವರನ್ನೆಲ್ಲ ವಾಪಸ್‌ ಕರೆಸಿಕೊಳ್ಳಲು ಪತ್ರ ಬರೆದಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡು ಇಲಾಖೆಯನ್ನು ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next