Advertisement

3 ವರ್ಷ ಕಳೆದರೂ ಸಿಗದ ಪರಿಹಾರ: 5 ಕುಟುಂಬಗಳಿಂದ ಸಾಮೂಹಿಕ ಆತ್ಮಹತ್ಯೆ ನಿರ್ಧಾರ

10:47 AM Apr 26, 2022 | Team Udayavani |

ಚಿಕ್ಕಮಗಳೂರು: ಮೂರು ವರ್ಷ ಕಳೆದರೂ ಪರಿಹಾರ ಸಿಗದ ಕಾರಣ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ ಐದು ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ.

Advertisement

2019ರಲ್ಲಿ ಪ್ರವಾಹ ಉಂಟಾಗಿ ಐದು ಮನೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು. ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು.  ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.

ಇದನ್ನೂ ಓದಿ:ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನ ನಕಲಿ ವೆಬ್‍ಸೈಟ್ ಸೃಷ್ಟಿ: ಕಿಡ್ನಿದಾನಕ್ಕೆ 4 ಕೋಟಿ ಆಮಿಷ

ಬಳಿಕ ಸಂತ್ರಸ್ತರು ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿದ್ದಾರೆ. ಮೂರು ವರ್ಷ ಕಳೆದರೂ ಯಾವುದೇ ಪರಿಹಾರ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧಾರ ಮಾಡಿದ್ದು, ಇದೀಗ ಸಂತ್ರಸ್ತರು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next