Advertisement

ಸರ್ಕಾರಿ ಕಾಲೇಜು ಆರಂಭಿಸಲು ಸಿಎಂಗೆ ರಕ್ತದಲ್ಲಿ ಪತ್ರ

12:30 AM Jan 11, 2019 | Team Udayavani |

ವಿಜಯಪುರ: ನಾಲತವಾಡದಲ್ಲಿ ಸರ್ಕಾರಿ ಕಾಲೇಜು ಆರಂಭಿಸುವಂತೆ ಆಗ್ರಹಿಸಿ ಯುವಕನೊಬ್ಬ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿ ಹಿರಿಯ ಅಧಿಕಾರಿಗಳಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾನೆ.

Advertisement

ಮುದ್ದೇಬಿಹಾಳ ತಾಲೂಕಿನ ನಾಲತವಾಡ ಗ್ರಾಮದ ಸಂಜೀವಕುಮಾರ ಜೋಶಿ, ಸಿಎಂ ಕುಮಾರಸ್ವಾಮಿ, ಮುದ್ದೇಬಿಹಾಳ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ, ಜಿಲ್ಲಾಧಿಕಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು, ಉಪ ನಿರ್ದೇಶಕರು ಸೇರಿ ಹಲವು ಪ್ರಮುಖ ಅಧಿಕಾರಿಗಳಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ನಾಲತವಾಡ ಸುಮಾರು 20 ಸಾವಿರ ಜನಸಂಖ್ಯೆ ಹೊಂದಿದ್ದು, ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಹೀಗಾಗಿ ನನ್ನೂರಿಗೆ ಸರ್ಕಾರಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಆರಂಭಿಸುವಂತೆ ನವಿಲು ಗರಿಯನ್ನು ಪೆನ್‌ ಮಾದರಿಯಲ್ಲಿ ಬಳಸಿ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಎರಡು ವರ್ಷಗಳ ಹಿಂದೆ ಗ್ರಾಮಕ್ಕೆ ಸರ್ಕಾರಿ ಪಪೂ ಹಾಗೂ ಪದವಿ ಕಾಲೇಜು ಆರಂಭಿಸುವಂತೆ ಹಲವರಿಗೆ ಪತ್ರ ಬರೆದಿರುವ ಸಂಜೀವಕುಮಾರ, ಕೆಲ ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ರಕ್ತದಲ್ಲೇ ಪತ್ರ ಬರೆದು ಆಗ್ರಹಿಸಿದ್ದ. ಆದರೆ ಪ್ರಧಾನಿ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇದೀಗ ಸಿಎಂ ಕುಮಾರಸ್ವಾಮಿ ಸೇರಿ ಹಲವರಿಗೆ ಮತ್ತೆ ರಕ್ತದಲ್ಲಿ ಪತ್ರ ಬರೆದಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next