ದಾವಣಗೆರೆ: ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ 300ಕ್ಕೂ ಹೆಚ್ಚು ನೌಕರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿಶ್ವೇಶ್ವರಯ್ಯ ಉದ್ಯಾನದಲ್ಲಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವ ಮೂಲಕ ವಿನೂತನ ಚಳವಳಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಎನ್.ಸಿ. ಹಾಲಸ್ವಾಮಿ, ರಾಜ್ಯ ಸಮಿತಿ ಸೆಪ್ಟೆಂಬರ್ 24 ರಿಂದ ಕೆಲಸ ಬಹಿಷ್ಕರಿಸಿಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಇಲಾಖೆಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರುಶಾಂತಿಯುತವಾಗಿ ಧರಣಿ ನಡೆಸುತ್ತಿದ್ದೇವೆ.ದಾವಣಗೆರೆಯಲ್ಲೂ 12 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು ಪತ್ರ ಚಳವಳಿ ಮೂಲಕ ಸರ್ಕಾರಕ್ಕೆ ನಮ್ಮ ಹೋರಾಟದ ಉದ್ದೇಶ ತಿಳಿಸಿದ್ದೇವೆ ಎಂದರು.
ನಾವು ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಕೆಲಸ ಕಾಯಂ ಮಾಡಬೇಕೆಂದು ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದೆ ಅಧಿಕಾರಿಗಳ ಮೂಲಕ ಶಿಸ್ತುಕ್ರಮದ ಎಚ್ಚರಿಕೆ ನೀಡಲು ನಿರ್ದೇಶನಮಾಡುತ್ತಿರುವುದು ವಿಷಾದನೀಯ. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದಾರೆ.ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ ನಮಗೆ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ನೋಟಿಸ್ ಜಾರಿ ಮಾಡುವ ಮೂಲಕ ನ್ಯಾಯಯುತ ಹೋರಾಟ ಹತ್ತಿಕ್ಕುವಕೆಲಸ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಮಾನ ವೇತನ, ಸೇವಾ ಭದ್ರತೆ, ಎಲ್ಲ ಹುದ್ದೆಗಳಿಗೆ ವೇತನ ಭತ್ಯೆ, ಶ್ರೇಣಿ ನೀಡಬೇಕು. ಹರಿಯಾಣ ರಾಜ್ಯದ ಮಾದರಿಯಲ್ಲಿ ಮಾನವಸಂಪನ್ಮೂಲ ನಿಯಮ ಜಾರಿಗೊಳಿಸಬೇಕು, ಮಧ್ಯವರ್ತಿಗಳಿಲ್ಲದೇ ವೇತನ ಇಲಾಖೆ ನೇರವಾಗಿ ಪಾವತಿಮಾಡಬೇಕು, ಬೋನಸ್ ನೀಡಬೇಕು, ವರ್ಗಾವಣೆಗೆ ಅವಕಾಶ ನೀಡಬೇಕು ಹೀಗೆಒಟ್ಟು 14 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಪತ್ರ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡಾ| ಮಂಜುನಾಥ್, ಪ್ರಮುಖರಾದ ಮಂಜುನಾಥ್ ಎ.ಎಲ್., ಲೀಲಾವತಿ, ಡಾ| ಅಂದನಗೌಡ ಪಾಟೀಲ್, ಅಂಬರೀಷ್, ಸಚಿನ್ ಹಾಗೂ ರವಿಕುಮಾರ್ ಹೊಳಲ್ಕೆರೆ ಮತ್ತಿತರರು ಇದ್ದರು.