Advertisement

ಸಾರಿಗೆ ನೌಕರ‌ರಿಂದ ಪತ್ರ ಚಳವಳಿ

01:18 PM Jun 15, 2019 | Team Udayavani |

ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರು ಪತ್ರ ಚಳವಳಿ ನಡೆಸಿದರು.

Advertisement

ಶುಕ್ರವಾರ ಇಲ್ಲಿನ ಹಳೇ ಬಸ್‌ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿ ಪತ್ರ ಚಳವಳಿ ನಡೆಸಿದರು. ಸರಕಾರದ ಪ್ರತಿಯೊಂದು ಯೋಜನೆಯನ್ನು ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಅಲ್ಲಿನ ಸರಕಾರ ಘೋಷಣೆ ಮಾಡಿದೆ. ತಾವೂ ಕೂಡ ಈ ಭರವಸೆಯನ್ನು ಹಿಂದೆ ನೀಡಿದ್ದೀರಿ. ತಮ್ಮ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಿಸಬೇಕು. ಸರಕಾರದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next