Advertisement

ಗೋಹತ್ಯೆ ನಿಷೇಧ ಕಾಯ್ದೆ ವಿರೋಧಿಸಿ ಪ್ರಧಾನಿಗೆ ಪತ್ರ ಚಳವಳಿ

01:12 PM Jun 03, 2017 | |

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿ ನಗರದ ಅಜೀಜ್‌ ಸೇs… ಬ್ಲಾಕ್‌ ಕಾಂಗ್ರೆಸ್‌ ಪ.ಜಾತಿ ಘಟಕದ ವತಿಯಿಂದ ಶುಕ್ರವಾರ ಅಂಚೆ ಚಳವಳಿ ನಡೆಸಲಾಯಿತು.

Advertisement

ನಗರದ ಅಶೋಕ ರಸ್ತೆಯಲ್ಲಿರುವ ಪ್ರಧಾನ ಅಂಚೆ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆಯಿಂದ ಅಲ್ಪಸಂಖ್ಯಾತರ ಆಹಾರಕ್ಕೆ ತೊಂದರೆಯಾಗುತ್ತಿದೆ.

ಅಲ್ಲದೆ ಈ ಕಾಯ್ದೆಯಿಂದಾಗಿ ಗೋವುಗಳ ಮಾರಾಟ, ವ್ಯಾಪಾರಕ್ಕೂ ಸಹ ಅಡ್ಡಿಯಾಗಲಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಕೂಡಲೇ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ರವಾನಿಸಿದರು. ಆಹಾರ ಸ್ವಇಚ್ಛೆಗೆ ಬಿಟ್ಟದ್ದಾಗಿದ್ದು, ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲು ಯಾವುದೇ ಸರ್ಕಾರಕ್ಕೆ ಅವಕಾಶವಿಲ್ಲ.

ಹೀಗಿದ್ದರೂ ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿರುವ ಮೂಲಕ ಹಲವು ಜನಾಂಗಗಳ ಆಹಾರ ಪದ್ಧತಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ. ಆದರೆ ದೇಶದಲ್ಲಿ ಸುಧಾರಣೆ, ಅಭಿವೃದ್ಧಿಗೆ ಅವಶ್ಯವಿರುವ ಹಲವು ವಿಷಯಗಳಿದ್ದು, ಈ ಬಗ್ಗೆ ಗಮನ ಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗೆ ಮುಂದಾಗಬೇಕೆಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next