Advertisement

ಎನ್‌ಡಿಆರ್‌ಎಫ್ ಪರಿಹಾರ ಮೊತ್ತ ಹೆಚ್ಚಿಸಲು ಕೇಂದ್ರಕ್ಕೆ ಪತ್ರ

11:15 PM Oct 12, 2019 | Lakshmi GovindaRaju |

ವಿಧಾನ ಪರಿಷತ್‌: ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ನೀಡುವ ಮೊತ್ತ ಹೆಚ್ಚಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

Advertisement

ಸದನದಲ್ಲಿ ನೆರೆ ಹಾವಳಿ ಕುರಿತ ಚರ್ಚೆಯಲ್ಲಿ ಪ್ರತಿಪಕ್ಷದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅಶೋಕ್‌, ಪ್ರತಿ ಐದು ವರ್ಷಗಳಿಗೊಮ್ಮೆ ಎನ್‌ಡಿಆರ್‌ಎಫ್ ಅಡಿಯಲ್ಲಿ ನೀಡುವ ಪರಿಹಾರ ಮೊತ್ತದ ಪರಿಷ್ಕರಣೆಯಾಗುತ್ತದೆ. ಆದಾಗ್ಯೂ ಪ್ರಸ್ತುತ ನೀಡುತ್ತಿರುವ ಅನುದಾನ ಕಡಿಮೆ. ಹೀಗಾಗಿ ಪ್ರಮಾಣ ಹೆಚ್ಚಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಪೂರಕ ಸ್ಪಂದನೆ ದೊರೆಯುವ ವಿಶ್ವಾಸವಿದೆ’ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಕಾಂಗ್ರೆಸ್‌ ಸದಸ್ಯ ಬಸವರಾಜ ಇಟಗಿ ಮಾತ ನಾಡಿ, 2005ರಿಂದಲೂ ಎನ್‌ಡಿಆರ್‌ಎಫ್ ಒಂದೇ ಮಾದರಿಯ ಮಾರ್ಗಸೂಚಿ ಅನುಸರಿಸುತ್ತಿದ್ದು, ಅದೇ ರೀತಿ ಪರಿಹಾರ ನೀಡುತ್ತಿದೆ. ಆದರೆ, ಕಳೆದ ಒಂದೂವರೆ ದಶಕದಲ್ಲಿ ಕಟ್ಟಡಗಳ ಮಾರ್ಗಸೂಚಿ ದರ, ಮಾರುಕಟ್ಟೆ ದರ ಸೇರಿ ಎಲ್ಲವೂ ಸಾಕಷ್ಟು ಏರಿಕೆಯಾಗಿದೆ.

ಹೀಗಾಗಿ ಎನ್‌ಡಿಆರ್‌ಎಫ್ನಲ್ಲಿ ನೀಡುವ ಅನು ದಾನ ಪರಿಷ್ಕರಿಸಲು ಕೇಂದ್ರಕ್ಕೆ ಒತ್ತಾಯಿಸಬೇಕು ಎಂದು ಆಡಳಿತ ಪಕ್ಷದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್‌ ಶೆಟ್ಟರ್‌, ಪ್ರತಿ ಐದು ವರ್ಷಕ್ಕೊಮ್ಮೆ ಪರಿಷ್ಕರಣೆ ಆಗುತ್ತಿದೆ. ಕಳೆದ 15 ವರ್ಷಗಳಲ್ಲಿ ಹಲವು ಬಾರಿ ಪರಿಷ್ಕರಣೆಯಾಗಿದೆ ಎಂದು ಸ್ಪಷ್ಟನೆ ನೀಡಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಪರಿಷತ್ತಿನ ಜೆಡಿಎಸ್‌ ನಾಯಕ ಬಸವರಾಜ ಹೊರಟ್ಟಿ, ಅನೇಕ ಬಾರಿ ಪರಿಷ್ಕರಣೆ ಮಾಡಿದ್ದರೂ, ಈಗ ಇಡೀ ದೇಶಕ್ಕೆ ಆಗಿರುವುದು ನಮ್ಮ ರಾಜ್ಯಕ್ಕಾಗಿದೆ. ಹೀಗಾಗಿ, ಈ ವರ್ಷ ಮಾತ್ರ ಪರಿಹಾರ ಸ್ವಲ್ಪ ಹೆಚ್ಚು ಕೊಡಿ ಎಂದು ಯಾಕೆ ಕೇಳಬಾರದು? ಬೇಕಿದ್ದರೆ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಹೋಗಿ, ನೆರೆಯ ತೀವ್ರತೆ ಬಗ್ಗೆ ಮನವರಿಕೆ ಮಾಡಿಕೊಡೋಣ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next