ಮತ್ತೂಂದೆಡೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಜಯಪುರ ಜಿಲ್ಲೆಯಲ್ಲಿರುವ ಕಾರಣ ಕೃಷ್ಣಾ ಭಾಗ್ಯ ಜಲ ನಿಗಮ
ನಿಯಮಿತದ-ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ವಿಜಯಪುರಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.
Advertisement
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕಾಗಿ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಮಾತ್ರವಲ್ಲ, ಕೃಷ್ಣಾ ಕಾಡಾ ಕಚೇರಿಯನ್ನೂ ವಿಜಯಪುರ ಜಿಲ್ಲೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ಕೆಬಿಜೆಎನ್‌ಎಲ್ ದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.