Advertisement
ರಾಜ್ಯಪಠ್ಯಕ್ರಮದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದಲೇ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಸುವ ನಿರ್ಧಾರವನ್ನು ಕೈಬಿಡುವಂತೆ ಸಚಿವ ತನ್ವೀರ್ ಸೇs… ಅವರಿಗೆ ಬರಗೂರು ರಾಮಚಂದ್ರಪ್ಪ ಪತ್ರ ಬರೆದಿದ್ದರು. ಇದಕ್ಕೆ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಈ ಕ್ರಮದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ್ದಾರೆ. ಕೇಂದ್ರೀಯ ಪಠ್ಯಕ್ರಮದಿಂದ ರಾಜ್ಯದ ಶೈಕ್ಷಣಿಕ ಸ್ವಾಯತ್ತತೆ ಹಾಗೂ ಹಕ್ಕಿಗೆ ಧಕ್ಕೆ ಬರಲಿದೆ. ರಾಜ್ಯದ ಪಠ್ಯಕ್ರಮ ಸರಿ ಇಲ್ಲ ಎಂದು ಸರ್ಕಾರವೇ ಸ್ವಯಂ ಆಗಿ ಒಪ್ಪಿಕೊಂಡಂತಾಗುತ್ತದೆ. ಜತೆಗೆ ಇದು ಗ್ರಾಮೀಣ ವಿದ್ಯಾರ್ಥಿಗಳಿಗೆ ಕಠಿಣವಾಗಲಿದೆ. ಹೀಗಾಗಿ ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ಏಕಪಕ್ಷೀಯ ತೀರ್ಮಾನವನ್ನು ಹಿಂದಕ್ಕೆ ಪಡೆಯುವಂತೆ ಎಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಈ ಕುರಿತಂತೆ ಶಿಕ್ಷಣ ಸಚಿವರಲ್ಲಿ ನಿಮ್ಮೊಂದಿಗೆ ಸಮಾಲೋಚಿಸಲು ತಿಳಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದುಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.