Advertisement

ಬಿ.ಸಿ.ರೋಡು ಜಕ್ರಿಬೆಟ್ಟು ಹೆದ್ದಾರಿ ಕಾಮಗಾರಿ ಸಂಚಾರ ನಿಷೇಧ ಆದೇಶಕ್ಕೆ ಡಿಸಿಗೆ ಪತ್ರ

05:48 PM Jun 23, 2020 | mahesh |

ಬಂಟ್ವಾಳ: ಕೆಸರುಮಯಗೊಂಡಿರುವ ಬಿ.ಸಿ.ರೋಡು ಜಕ್ರಿಬೆಟ್ಟು ಹೆದ್ದಾರಿಯ ಕಾಮಗಾರಿಯ ಹಿನ್ನೆಲೆಯಲ್ಲಿ 20 ದಿನಗಳ ಕಾಲ ಸಂಚಾರ ನಿಷೇಧಕ್ಕೆ ಆದೇಶ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ದ.ಕ.ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.

Advertisement

ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಇ ಜಿ.ಎನ್.ಹೆಗ್ಡೆ ಹಾಗೂ ಎಇಇ ಎಚ್.ಪಿ.ರಮೇಶ್ ಅವರ ನಿಯೋಗ ಹೆದ್ದಾರಿಯನ್ನು ಪರಿಶೀಲನೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಹೆದ್ದಾರಿಯ ಒಂದುಯ ಬದಿ 7 ಮೀ. ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕ್ಯೂರಿಂಗ್‌ಗಾಗಿ 20 ದಿನಗಳ ಸಮಯಾವಕಾಶ ಬೇಕಿರುವುದರಿಂದ ಸಂಚಾರ ನಿಷೇಧಕ್ಕೆ ಮನವಿ ಮಾಡಿದೆ.

ಸಂಚಾರ ನಿಷೇಧದ ಹಿನ್ನೆಲೆಯಲ್ಲಿ ಬಿ.ಸಿ.ರೋಡುನಿಂದ ಬೆಳ್ತಂಗಡಿಗೆ ಸಾಗುವ ಘನ ವಾಹನಗಳು ಬಿ.ಸಿ.ರೋಡು ಉಪ್ಪಿನಂಗಡಿ ಗುರುವಾಯನಕರೆ ಹೆದ್ದಾರಿಯಲ್ಲಿ ಸಂಚರಿಸಬೇಕು. ಲಘು ವಾಹನಗಳು ಬಂಟ್ವಾಳ ಪೇಟೆಯ ಮೂಲಕ ಸಾಗುವುದಕ್ಕೆ ಕ್ರಮಕೈಗೊಳ್ಳಲು ಎಸ್‌ಪಿಗೆ ಸೂಚಿಸಲು ಪತ್ರದಲ್ಲಿ ತಿಳಿಸಲಾಗಿದೆ.

ಎಂಆರ್‌ಪಿಎಲ್ ಪೈಪುಲೈನ್ ಕಾಮಗಾರಿಯನ್ನು ಕೂಡ ವೇಗವಾಗಿ ನಡೆಸುವಂತೆ ಅಽಕಾರಿಗಳು ಸೂಚಿಸಿದ್ದು, ಜತೆಗೆ ಹೆದ್ದಾರಿಯ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಸೂಚಿಸಿದ್ದಾರೆ. ರಾ.ಹೆ.ಇಲಾಖೆಯ ಜೆಇ ಕೇಶವಮೂರ್ತಿ, ಎಇ ಕೀರ್ತಿ ಅಮೀನ್, ಗುತ್ತಿಗೆಯ ಸಂಸ್ಥೆಯ ಶರಣ್ ಗೌಡ, ದಾಮೋದರ್ ಎಂ.ಕೆ. ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next