Advertisement
ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ಅಥವಾ ಶರಣ ಸಾಹಿತ್ಯದ ಕೇಂದ್ರ ಬಿಂದುವಾಗಿದ್ದ ಕಲಬುರಗಿಯಲ್ಲಿ ಜಗಜ್ಯೋತಿ ಗುರು ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳ ಮಾಚಿದೇವ, ದೇವರ ದಾಸಿಮಯ್ಯ, ಅಂಬಿಗರ ಚೌಡಯ್ಯ, ಡೋಹರ ಕಕ್ಕಯ್ಯ, ಸರ್ವಜ್ಞರಂತಹ ನಾಡಿನ ಮೇರು ಶರಣ ಸಾಹಿತಿಗಳ ಬದುಕು ಹಾಗೂ ಅವರಿಂದ ರಚಿತವಾದ ವಚನಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಿ ಅರಿವು ಮೂಡಿಸುವ ಕೇಂದ್ರವಾಗಿ, ವಚನ ಸಂಗ್ರಹಾಲಯವಾಗಿ “ವಚನ ಮಂಟಪ’ವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಇದಕ್ಕಾಗಿ 20 ಎಕರೆ ಜಾಗವನ್ನು ಮೀಸಲಿಡಬೇಕೆಂದು ಕೋರಿದ್ದಾರೆ. ಬಸವಣ್ಣನವರ ಜ್ಞಾನದ ಜ್ಯೋತಿಯ ಪ್ರಕಾಶವನ್ನು ಇಡೀ ಜಗತ್ತಿಗೆ ಪ್ರಜ್ವಲಿಸುವಂತೆ ಮೂಡುವ ಸಲುವಾಗಿ ರಾಜ್ಯದಲ್ಲಿ ಒಂದು ಕೇಂದ್ರೀಕೃತ “ವಚನ ವಿಶ್ವವಿದ್ಯಾಲಯ’ವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. Advertisement
Karnataka: ವಚನ ಮಂಟಪ, ವಚನ ವಿವಿ ಸ್ಥಾಪನೆಗೆ ಪ್ರಿಯಾಂಕ್ ಖರ್ಗೆ ಪತ್ರ
10:22 PM Feb 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.