Advertisement

ಎನ್‌ಐಎ ತನಿಖೆಗೆ ಆಗ್ರಹಿಸಿ ರಾಜನಾಥ್‌ಸಿಂಗ್‌ಗೆ ಪತ್ರ

03:30 AM Jul 09, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಜಿಹಾದಿ ಶಕ್ತಿಗಳು ಆರ್‌ಎಸ್‌ಎಸ್‌, ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದ್ದು, ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಈ ಹತ್ಯೆಗಳ ಹಿಂದಿರುವ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್‌ ಡಿಗ್ನಿಟಿ (ಕೆಎಫ್ಡಿ) ಸಂಘಟನೆಗಳನ್ನು ನಿಷೇಧಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಹತ್ಯೆ ಹಿನ್ನೆಲೆಯಲ್ಲಿ ರಾಜನಾಥ್‌ ಸಿಂಗ್‌ ಅವರಿಗೆ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 23 ಆರ್‌ಎಸ್‌ಎಸ್‌, ಹಿಂದೂ ಸಂಘಟನೆ ಮತ್ತು ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಮತ್ತು 6 ಮಂದಿಯ ಹತ್ಯೆ ಯತ್ನ ನಡೆದಿದೆ.

ಬೆಂಗಳೂರು: ರಾಜ್ಯದಲ್ಲಿ ಜಿಹಾದಿ ಶಕ್ತಿಗಳು ಆರ್‌ಎಸ್‌ಎಸ್‌, ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದ್ದು, ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ರತ್ತು ಕರ್ನಾಟಕ ಫೋರಂ ಫಾರ್‌ ಡಿಗ್ನಿಟಿ (ಕೆಎಫ್ಡಿ) ಸಂಘಟನೆಗಳನ್ನು ನಿಷೇಧಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಹತ್ಯೆ ಹಿನ್ನೆಲೆಯಲ್ಲಿ ರಾಜನಾಥ್‌ ಸಿಂಗ್‌ ಅವರಿಗೆ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 23 ಆರ್‌ಎಸ್‌ಎಸ್‌, ಹಿಂದೂ ಸಂಘಟನೆ ಮತ್ತು ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಮತ್ತು 6 ಮಂದಿಯ ಹತ್ಯೆ ಯತ್ನ ನಡೆದಿದೆ.

ಈ ಎಲ್ಲಾ ಕೃತ್ಯಗಳ ಹಿಂದೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್‌ ಡಿಗ್ನಿಟಿ (ಕೆಎಫ್ಡಿ) ಎಂಬ ಎರಡು ಸಂಘಟನೆಗಳ ಕೈವಾಡವಿದೆ ಎಂಬ ಬಲವಾದ ಶಂಕೆಯಿದೆ. ಆದರೂ ರಾಜ್ಯ ಸರ್ಕಾರ ಈ ಸಂಘಟನೆಗಳ ವಿರುದಟಛಿ ಕ್ರಮ ಕೈಗೊಳ್ಳದ ಕಾರಣ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಎನ್‌ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಎಲ್ಲಾ ಕೃತ್ಯಗಳ ಹಿಂದೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್‌ ಡಿಗ್ನಿಟಿ (ಕೆಎಫ್ಡಿ) ಎಂಬ ಎರಡು ಸಂಘಟನೆಗಳ ಕೈವಾಡವಿದೆ ಎಂಬ ಬಲವಾದ ಶಂಕೆಯಿದೆ. ಆದರೂ ರಾಜ್ಯ ಸರ್ಕಾರ ಈ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಎನ್‌ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next