Advertisement

ಮೀನುಗಾರರ ಪತ್ತೆಗೆ ವೈಮಾನಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ

01:05 AM Jan 11, 2019 | |

ಬೆಂಗಳೂರು: ಉಡುಪಿ ಕಡಲತೀರದಿಂದ ಕಾಣೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಲು ಅಗತ್ಯ ವೈಮಾನಿಕ ನೆರವು ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್‌ ಅವರಿಗೆ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ  ಪತ್ರ ಬರೆದಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕರಣೆ ನೀಡಿರುವ ಸಚಿವರು, ಕಳೆದ ತಿಂಗಳು ಸುವರ್ಣ ತ್ರಿಭುಜ ಎನ್ನುವ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ ಮೀನುಗಾರರು ನಂತರ ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆ ಹಚ್ಚುವಂತೆ ಸ್ಥಳೀಯ ಕರಾವಳಿ ರಕ್ಷಣಾ ಪಡೆ ಮತ್ತು ನೌಕಾದಳಗಳಿಗೆ ಅಗತ್ಯ ಮಾಹಿತಿ ನೀಡಲಾಗಿದೆ. ಮೀನುಗಾರರನ್ನು ಹುಡುಕಲು ಸರ್ಕಾರ ಕೂಡ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ. ಕೇಂದ್ರ ಸರ್ಕಾರವೂ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಮೀನುಗಾರರ ಪತ್ತೆ ಕಾರ್ಯಾಚರಣೆಗೆ ಅಗತ್ಯ ಇರುವ ವೈಮಾನಿಕ ನೆರವು ನೀಡುವಂತೆ ಅಥವಾ ಇನ್ನಿತರ ಬಗೆಯ ಸೂಕ್ತ ನೆರವು ಒದಗಿಸುವಂತೆ ಪತ್ರದಲ್ಲಿ ಸಚಿವರು ಕೋರಿದ್ದಾರೆ.

ಇದೇ ಸಂದರ್ಭದಲ್ಲಿ  ಕಳೆದ ನಾಲ್ಕು ತಿಂಗಳಿನಿಂದ ಇರಾನ್‌ನಲ್ಲಿ ಆಕಸ್ಮಿಕವಾಗಿ ಸಿಲುಕಿಕೊಂಡಿದ್ದ ಭಟ್ಕಳದ 18 ಮೀನುಗಾರರು ಸುರಕ್ಷಿತವಾಗಿ ವಾಪಸ್‌ ಬರಲು ನೆರವು ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಸಚಿವ ದೇಶಪಾಂಡೆ ಕೃತಜ್ಞತೆ ಸಲ್ಲಿಸಿದ್ದಾರೆ.

ಭತ್ಯೆ ಹೆಚ್ಚಳ
ತೋಟಿ, ತಳವಾರ, ನೀರಗಂಟಿ, ವಾಲೀಕಾರ ಸನದಿ ಸೇರಿದಂತೆ ಕೆಳದರ್ಜೆ ನೌಕರರಿಗೆ ಹಾಲಿ ನೀಡುತ್ತಿರುವ ಮಾಸಿಕ 800 ರೂ. ಅನುಕಂಪ ಭತ್ಯೆಯನ್ನು 1600 ರೂ.ಗೆ ಹೆಚ್ಚಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

Advertisement

ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ 2,869 ಕೆಳದರ್ಜೆ ನೌಕರರಿದ್ದಾರೆ.  ಈ ಪೈಕಿ ಬೆಂಗಳೂರು ಕಂದಾಯ ವಿಭಾಗದಲ್ಲಿ 281 ಮತ್ತು ಕಲಬುರಗಿ ವಿಭಾಗದಲ್ಲಿ 607 ಮಂದಿ ಇದ್ದಾರೆ. ಇವೆರಲ್ಲರಿಗೂ ಹೆಚ್ಚಳದ ಲಾಭ ಸಿಗಲಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next