Advertisement

ಹಾಲಿನ ಉತ್ಪನ್ನ ಆಮದು ಮಾಡಿಕೊಳ್ಳದಿರಲು ಕೇಂದ್ರಕ್ಕೆ ಪತ್ರ

09:58 AM Oct 26, 2019 | sudhir |

ಬೆಂಗಳೂರು: ಹಾಲು ಮತ್ತದರ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳದಿರುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದು, ನಾಲ್ಕಾರು ದಿನಗಳಲ್ಲಿ ರಾಜ್ಯದ ಎಲ್ಲ ಸಂಸದರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಭೇಟಿ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Advertisement

ಹೆಬ್ಟಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಹಮ್ಮಿಕೊಂಡ ನಾಲ್ಕು ದಿನಗಳ ಕೃಷಿ ಮೇಳಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ಇಲ್ಲಿನ ಉತ್ಪಾದಕರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆದ್ದರಿಂದ ಆಮದು ಒಪ್ಪಂದಕ್ಕೆ ಮುಂದಾಗದಂತೆ ಪತ್ರ ಬರೆದು ಮನವಿ ಮಾಡಲಾಗಿದೆ. ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ರೈತರಿಗೆ ವಾರ್ಷಿಕ ಎರಡು ಕಂತುಗಳಲ್ಲಿ ತಲಾ ಎರಡು ಸಾವಿರ ರೂ.ಗಳಂತೆ ನಾಲ್ಕು ಸಾವಿರ ನೀಡುವುದಾಗಿ ಸರಕಾರ ಘೋಷಿಸಿತ್ತು. ಈ ಪೈಕಿ ಈಗಾಗಲೇ ಮೊದಲ ಕಂತಿನಲ್ಲಿ 25 ಲಕ್ಷ ರೈತರ ಖಾತೆಗಳಿಗೆ 489 ಕೋ. ರೂ. ಜಮೆ ಆಗಿದೆ ಎಂದು ಮಾಹಿತಿ ನೀಡಿದರು.

ಕೃಷಿ ಸಚಿವ ಲಕ್ಷ್ಮಣ ಸವದಿ ಮಾತನಾಡಿ, ರಸಗೊಬ್ಬರ ಹೆಚ್ಚಾಗಿ ಬಳಸುವುದರಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ವಿಜ್ಞಾನಿಗಳು ರೈತರಿಗೆ ಜಾಗೃತಿ ಮೂಡಿಸಬೇಕು. ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next