Advertisement

ನಾಯಕರ ಸಭೆಯ ಬಗ್ಗೆ ಹೈಕಮಾಂಡ್‌ಗೆ ಪರಂ ಪತ್ರ

10:15 AM Jan 07, 2020 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪಕ್ಷದ ನಾಯಕತ್ವ ಕುರಿತು ಹಿರಿಯ ನಾಯಕರಿಂದ ವ್ಯಕ್ತವಾದ ಅಭಿಪ್ರಾಯವನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೈಕಮಾಂಡ್‌ಗೆ ಮಾಹಿತಿ ರವಾನಿಸಿದ್ದಾರೆ.

Advertisement

ಶನಿವಾರ ತಮ್ಮ ಸ್ವಗೃಹದಲ್ಲಿ ಹೈಕಮಾಂಡ್‌ ಸೂಚನೆ ಮೇರೆಗೆ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರ ನೇಮಕ ಕುರಿತಂತೆ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದು, ಅದನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಇ ಮೇಲ್‌ ಮೂಲಕ ರವಾನಿಸಿದ್ದು, ಈ ಕುರಿತಂತೆ ಚರ್ಚಿಸಲು ಸಮಯ ನೀಡಲು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಷಯದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ಬಹುತೇಕ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ. ಆದರೆ, ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್‌ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರ ಹೆಸರುಗಳೂ ಸಭೆಯಲ್ಲಿ ಪ್ರಸ್ತಾಪವಾಗಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ವಿಷಯದಲ್ಲಿ ಎರಡು ಹುದ್ದೆಗಳಿಗೆ ಪ್ರತ್ಯೇಕವಾಗಿ ನೇಮಕ ಮಾಡುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಅಲ್ಲದೇ ಎಐಸಿಸಿಗೆ ರಾಜ್ಯದಿಂದ ಕನಿಷ್ಠ ಇಬ್ಬರು ನಾಯಕರಿಗೆ ಅವಕಾಶ ಕಲ್ಪಿಸಬೇಕೆಂಬ ಸಲಹೆ ವ್ಯಕ್ತವಾಗಿದೆ ಎಂದು ಹೈಕಮಾಂಡ್‌ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next