Advertisement
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಪರಿಸರ ಚಿಂತಕರ ವೇದಿಕೆ ಜಿಲ್ಲಾಧ್ಯಕ್ಷ ಎ.ಟಿ.ಕೃಷ್ಣನ್, ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ರೂಪಿಸಿರುವ ಹೆಬ್ಟಾಳ- ನಾಗವಾರ ಕೊಳಚೆ ನೀರು ಚಿಕ್ಕಬಳ್ಳಾಪುರ, ಬೆಂಗಳೂರುನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಜೀವ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕಳವಳ
ವ್ಯಕ್ತಪಡಿಸಿದರು. ವಿರೋಧದ ನಡುವೆಯೂ ಸರ್ಕಾರ ಸೆ.18 ರಂದು ಶಂಕುಸ್ಥಾಪನೆ ನೆರವೇರಿಸಿದೆ. ಇದರಿಂದ ಅಪಾಯಕಾದಿದೆ. ಕೂಡಲೇ ಹೆಬ್ಟಾಳ-ನಾಗವಾರ ವ್ಯಾಲಿ ಯೋಜನೆಗೆ ತಡೆ ನೀಡಬೇಕೆಂದು ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.