Advertisement
ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ ಕನ್ನಡದ 300 ಪ್ರತಿಗಳ ಖರೀದಿಯನ್ನು 500 ಪ್ರತಿಗಳಿಗೆ ಹೆಚ್ಚಿಸಲು ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.
Related Articles
Advertisement
ನಾಡಿನ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ನೇತೃತ್ವದ ರಾಜ್ಯ ಪುಸ್ತಕ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಕೆಲಸ ಮಾಡಲಿದೆ ಎಂದು ಆಶಯ ವ್ಯಕ್ತಪಡಿಸಿದ ಸಚಿವರು, ಹಳಬರೊಂದಿಗೆ ಒಳ್ಳೆಯ ಪುಸ್ತಕ ಬರೆದ ಹೊಸ ಲೇಖಕರ, ಅನಾಮಿಕರ ಪುಸ್ತಕಗಳನ್ನೂ ಖರೀದಿಸಿ ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಲಿ ಎಂದು ಸಲಹೆ ನೀಡಿದರು.
ರಾಜ್ಯ ಪುಸ್ತಕ ಆಯ್ಕೆ ಸಮಿತಿ ಇನ್ನೂ ಪೂರ್ಣಗೊಂಡಿಲ್ಲ. ನಿಮಯಗಳಲ್ಲಿ ಅವಕಾಶವಿರುವ ಸಾಹಿತ್ಯವಲಯ, ಶಿಕ್ಷಣ ತಜ್ಞರ ವಲಯ, ವಿಭಾಗವಾರು, ಮಹಿಳೆ, ವಿಜ್ಞಾನ, ಮಾನವಿಕ ಶಾಸ್ತ್ರದ ವಲಯ, ಮಕ್ಕಳ ಸಾಹಿತ್ಯ, ಗ್ರಂಥಾಲಯ ವಿಜ್ಞಾನ ವಿಭಾಗಗಳಿಂದ ಖಾಲಿ ಇರುವ ಸ್ಥಾನಗಳನ್ನು ಸದ್ಯದಲ್ಲೇ ಭರ್ತಿ ಮಾಡಿ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.ಸಮಿತಿ ಅಧ್ಯಕ್ಷ ಹಿರಿಯ ಸಾಹಿತಿ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ದೊಡ್ಡರಂಗೇಗೌಡ ಸಮಿತಿಯ ಸದಸ್ಯರಾದ ನಾವು ನಿಯಮಗಳಿಗೆ ಅಪಚಾರವಾಗದಂತೆ ನಡೆದುಕೊಳ್ಳೋಣ ಹಾಗೆಯೇ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಿ, ಅವರಲ್ಲಿ ಗ್ರಂಥಗಳ ಅಭಿರುಚಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಲಲಾಗುವುದು ಎಂದರು. ಸಮಿತಿಯ ಕೆಲಸಗಳು ಪಾರದರ್ಶಕವಾಗಿರುವಂತೆ ಎಲ್ಲರೂ ಸಹಕರಿಸಬೇಕೆಂದು ಸದಸ್ಯರಲ್ಲಿ ಮನವಿ ಮಾಡಿದರು. ಸಮಿತಿ ಸದಸ್ಯರಾದ ಕನ್ನಡ ಸಾಹಿತ್ಯ ಪರಿಷತ ಅಧ್ಯಕ್ಷ ಮನುಬಳಿಗಾರ್, ರಾ.ನಂ. ಚಂದ್ರಶೇಖರ, ದೊಡ್ಡೇಗೌಡ, ನಿಡಸಾಲೆ ಪುಟ್ಟಸ್ವಾಮಯ್ಯ, ಎಂ.ಆರ್. ಗಿರಿರಾಜ, ಮಂಜುನಾಥ, ಪ್ರಕಾಶ ಕಂಬತ್ತಳ್ಳಿ, ಹರಿಲಾಲ್ ಪವಾರ್, ಲೋಕಪ್ಪ, ಡಾ. ಎ.ವೈ. ಆಸುಂಡಿ ಮತ್ತಿತರರು ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು. ರಾಜ್ಯ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಇಲಾಖೆಗಳ ಕಾರ್ಯಕ್ರಮಗಳನ್ನು ವಿವರಿಸಿದರು.