ಜಮ್ಮು ಕಾಶ್ಮೀರ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಈಗ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಧೋನಿ ಇಂದು ಲಡಾಖ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದರು.
ಬುಧವಾರವೇ ಇಲ್ಲಿಗೆ ಬಂದಿದ್ದ ಮಹೇಂದ್ರ ಸಿಂಗ್ ಧೋನಿಗೆ ಭಾರತೀಯ ಯೋಧರಿಂದ ಉತ್ತಮ ಸ್ವಾಗತ ದೊರಕಿತ್ತು. ಯೋಧರೊಂದಿಗೆ ಕಾಲ ಕಳೆದ ಧೋನಿಯ ಕೆಲವು ಚಿತ್ರಗಳು ಇಂಟರ್ನೆಟ್ ನಲ್ಲಿ ಹರಿದಾಡುತ್ತಿದ್ದಾವೆ.
ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್ ನಲ್ಲಿ ಸಹ ಯೋಧರೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಿದ ಧೋನಿ ಸೇನಾ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ, ಮಾತುಕತೆ ನಡೆಸಿದರು.
38 ವರ್ಷದ ಧೋನಿ ಬಿಸಿಸಿಐನಿಂದ ಎರಡು ತಿಂಗಳ ರಜೆ ಪಡೆದು ಜುಲೈ 30ರಿಂದ ಜಮ್ಮು ಕಾಶ್ಮೀರದಲ್ಲಿ 106 ನೇ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Related Articles