Advertisement
ಅಂದಾಜು 2000 ಸಾವಿರ ಕೋಟಿ ರೂ.ಮೌಲ್ಯದ ಜಮೀನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ಕೈಗೊಂಡಿರುವ ಕ್ರಮಗಳು ಹಾಗೂ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಎರಡು ಬಾರಿ ಆದೇಶ ಮಾಡಿದ್ದರೂ ವರದಿ ಸಲ್ಲಿಕೆಯಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತರು, ಜಿಲ್ಲಾಡಳಿತಕ್ಕೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವ ಎಚ್ಚರಿಕೆ ನೀಡಿದ್ದಾರೆ.
Related Articles
Advertisement
ಸರ್ಕಾರಿ ಜಮೀನು ಎಂಬ ಅಂಶ ಎತ್ತಿಹಿಡಿದಿದ್ದ ಹೈಕೋರ್ಟ್!: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಮನವರ್ತೆ ಕಾವಲ್ ( ಚೋಡನಹಳ್ಳಿ) ಸರ್ವೇ ನಂಬರ್ 137ರಲ್ಲಿನ 180 ಎಕರೆ ಭೂಮಿಯನ್ನು ರಾಜಕಾರಣಿಗಳ ಪ್ರಭಾವ ಹೊಂದಿರುವ ಉದ್ಯಮಿ ಕುಟುಂಬ 1953-54ರಲ್ಲಿ ಕಂದಾಯ ಇಲಾಖೆ ದಾಖಲೆಗಳನ್ನು ತಿದ್ದುಪಡಿ ಮಾಡಿ ಮೂಲ ಮಾಲೀಕರಿಂದ ಖರೀದಿ ಮಾಡಿದ ಬಗ್ಗೆ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಆರೋಪವಿತ್ತು.
ಪ್ರತ್ಯೇಕವಾಗಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿಗಳನ್ನು ಹೈಕೋರ್ಟ್ ಈ ಸಂಬಂಧ 2001ರಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇತ್ಯರ್ಥಪಡಿಸಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಭೂ ವ್ಯಾಜ್ಯದ ವಿಚಾರಣೆ ನಡೆಸಿದ್ದ ಬೆಂಗಳೂರು ವಿಶೇಷ ಜಿಲ್ಲಾಧಿಕಾರಿ, ಉದ್ಯಮಿ ಕುಟುಂಬ 180 ಎಕರೆ ಜಮೀನು ಖರೀದಿಸಿದ್ದಕ್ಕೆ ಕಾನೂನು ಮಾನ್ಯತೆಯಿಲ್ಲ, ಜಮೀನು ಸರ್ಕಾರದ ಸ್ವತ್ತು ಎಂದು ಆದೇಶ ಹೊರಡಿಸಿದ್ದರು. ಇದನ್ನು ಮಾತ್ರ ಮಾಡಿದ ಹೈಕೋರ್ಟ್ ಜಿಲ್ಲಾಧಿಕಾರಿಗಳ ಆದೇಶವನ್ನೇ 2008 ಪುರಸ್ಕರಿಸಿ ತೀರ್ಪು ನೀಡಿತ್ತು.
ಸರ್ಕಾರದ ಲೋಪ ಎತ್ತಿಹಿಡಿದಿದ್ದ ಲೋಕಾ: 180 ಎಕರೆ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಭೂ ಕಬಳಿಕೆ ತಡೆ ಸಮಿತಿ ನೀಡಿದ್ದ ದೂರಿನ ಸಂಬಂಧ 2015 ಮೇ 2ರಂದು ಭೂ ಕಬಳಿಕೆ ತಡೆ ಸಮಿತಿ ಅಧ್ಯಕ್ಷ ಎ.ಟಿ ರಾಮಸ್ವಾಮಿ ನೀಡಿದ್ದ ದೂರಿನ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಆಗಿನ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ,
180 ಎಕರೆ ಸರ್ಕಾರಕ್ಕೆ ಸೇರಿದೆ ಎಂಬ ಬಗ್ಗೆ ವಿಶೇಷ ಜಿಲ್ಲಾಧಿಕಾರಿ ಆದೇಶ, ಈ ಆದೇಶ ಮಾನ್ಯ ಮಾಡಿರುವ ಹೈಕೋರ್ಟ್ ತೀರ್ಪುಗಳಿದ್ದರೂ, ಭೂಮಿ ವಶಕ್ಕೆ ಪಡೆಯುವ ಸಂಬಂಧ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಈ ಬಗ್ಗೆ ಕಂದಾಯ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ಮೇ 8, 2015ರಂದು ನೋಟಿಸ್ ಜಾರಿಗೊಳಿಸಿದ್ದರು.
ಬಿ.ಎಂ ಕಾವಲ್‌ನ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳ ಅಹವಾಲನ್ನು ಆಲಿಸಿ ವಿಚಾರಣೆ ಪೂರ್ಣಗೊಳಿಸಲಾಗಿದೆ. ಸದ್ಯದಲ್ಲಿಯೇ ಆದೇಶವನ್ನೂ ಹೊರಡಿಸಲಾಗುತ್ತದೆ. ಈ ಕುರಿತು ವಸ್ತುಸ್ಥಿತಿ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸಲಿದ್ದೇನೆ -ಎಸ್.ರಂಗಪ್ಪ, ವಿಶೇಷ ಜಿಲ್ಲಾಧಿಕಾರಿ