Advertisement
ಈ ಪ್ರಕರಣದಲ್ಲಿ ಈತನ ಮೇಲಿನ ಆರೋಪವು ಸಾಬೀತಾಗಿದೆ ಎಂದು ನ್ಯಾಯಾಧೀಶರಾದ ಸೈಯೀದುನ್ನೀಸಾ ಅವರು ಜು. 12ರಂದು ಘೋಷಿಸಿ, ಶಿಕ್ಷೆಯ ಪ್ರಮಾಣದ ವಿಚಾರಣೆಯನ್ನು ಜು. 18ಕ್ಕೆ ನಿಗದಿಪಡಿಸಿದ್ದರು.
ಐಪಿಸಿ ಸೆಕ್ಷನ್ 302 (ಕೊಲೆ) ಅಪರಾಧಕ್ಕೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಸಜೆ, ಸೆಕ್ಷನ್ 328 (ವಿಷ ಉಣಿಸಿದ್ದು) ಅಪರಾಧಕ್ಕೆ 10 ವರ್ಷ ಜೈಲುಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳು ಸಾದಾ ಸಜೆ, ಸೆಕ್ಷನ್ 392 (ಚಿನ್ನಾಭರಣ ಸುಲಿಗೆ) ಅಪರಾಧಕ್ಕೆ 5 ವರ್ಷ ಕಠಿನ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಸಜೆ, ಸೆಕ್ಷನ್ 394 (ಸುಲಿಗೆಗಾಗಿ ವಿಷ ಪ್ರಾಶನ) ಅಪರಾಧಕ್ಕೆ 10 ವರ್ಷ ಕಠಿನ ಶಿಕ್ಷೆ, 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ವರ್ಷಗಳ ಕಾಲ ಸಾದಾ ಜೈಲು ಶಿಕ್ಷೆ, ಸೆಕ್ಷನ್ 417 (ವಂಚನೆ) ಅಪರಾಧಕ್ಕೆ 1 ವರ್ಷ ಸಾದಾ ಸಜೆ, ಸೆಕ್ಷನ್ 201 (ಸಾಕ್ಷಿನಾಶ) ಅಪರಾಧಕ್ಕೆ 7 ವರ್ಷ ಕಠಿನ ಶಿಕ್ಷೆ ಹಾಗೂ 5,000 ರೂ. ರೂ. ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಜೈಲುಶಿಕ್ಷೆ ವಿಧಿಸಲಾಗಿದೆ. ಯುವತಿಯ ಹೆತ್ತವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ಪಡೆದುಕೊಳ್ಳಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಪ್ರಕರಣದಲ್ಲಿ 41 ಸಾಕ್ಷಿದಾರರು, 50 ದಾಖಲೆಗಳು ಹಾಗೂ 42 ಸಾಂದರ್ಭಿಕ ಸಾಕ್ಷಿಗಳನ್ನು ವಿಚಾರಣೆ ಮಾಡಲಾಗಿತ್ತು. ಆರೋಪಿಯು ಯುವತಿಯ ಚಿನ್ನಾಭರಣವನ್ನು ಮಾರಾಟ ಮಾಡಿದ್ದ ಮಳಿಗೆಯಿಂದ ವಾಪಸ್ ಪಡೆದು ಪೋಷಕರಿಗೆ ಒಪ್ಪಿಸಲಾಗಿದೆ. ಸರಕಾರದ ಪರವಾಗಿ ಜುಡಿತ್ ಒ.ಎಂ.ಕ್ರಾಸ್ತಾ ಅವರು ವಾದ ಮಂಡಿಸಿದ್ದರು.
Related Articles
ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಮೋಹನ ಕುಮಾರ್‌ನಿಗೆ ನ್ಯಾಯಾಧೀಶರಾದ ಸೈಯೀದುನ್ನೀಸಾ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆಯ ವಿವರ ನೀಡಿದರು.
Advertisement
15 ಕೇಸುಗಳಲ್ಲಿ ಜೀವಾವಧಿ ಶಿಕ್ಷೆಮೋಹನ್ ಕುಮಾರ್ ವಿರುದ್ಧ 20 ಕೇಸುಗಳು ದಾಖಲಾಗಿದ್ದು, ಈ ಪೈಕಿ 15 ಕೇಸುಗಳಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಐದು ಕೇಸುಗಳು ವಜಾಗೊಂಡಿದ್ದು, ಇನ್ನು ಐದು ಕೇಸುಗಳು ವಿಚಾರಣೆಗೆ ಬಾಕಿ ಇವೆ.