Advertisement
ಧಾರವಾಡ ತಾಲೂಕಿನ ನವಲಗುಂದ ನಿವಾಸಿಗಳಾದ ಅಂಬಣ್ಣ ಅಲಿಯಾಸ್ ಅಂಬರೀಶ್ ಹಾಗೂ ಆತನ ಪತ್ನಿ ರಶೀದಾ ಅಲಿಯಾಸ್ ಜ್ಯೋತಿ ಶಿಕ್ಷೆಗೆ ಗುರಿಯಾದವರು. 80 ವರ್ಷ ಪ್ರಾಯದ ರತ್ನಾವತಿ ಶೇಡ್ತಿ ಕೊಲೆಯಾದವರು. ದಂಪತಿಗೆ ಜೀವಾವಧಿ ಶಿಕ್ಷೆಯ ಜತೆಗೆ ತಲಾ 50,000 ರೂ. ದಂಡ ವಿಧಿಸಲಾಗಿದೆ.
Related Articles
Advertisement
ಆರೋಪಿಗಳು ಬಿಟ್ಟಿದ್ದ ಸುಳಿವಿನ ಜಾಡು ಹಿಡಿದ ಪೊಲೀಸರು ಜು. 10ರಂದು ಆರೋಪಿ ದಂಪತಿಯನ್ನು ಬಂಧಿಸಿದ್ದರು. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಜು. 2ರಂದು ಮಧ್ಯಾಹ್ನ ರತ್ನಾವತಿ ಶೆಡ್ತಿ ಮನೆಗೆ ನುಗ್ಗಿ ಆಭರಣಕ್ಕೆ ಬೇಡಿಕೆ ಇಟ್ಟಿದ್ದರು. ಕೊಡಲು ನಿರಾಕರಿಸಿದಾಗ ಕತ್ತಿಯಿಂದ ಕೊಲೆ ಮಾಡಿ ಮೈಮೇಲಿದ್ದ ಆಭರಣ, ಮನೆಯಲ್ಲಿದ್ದ ಚಿನ್ನಾಭರಣ, ಮೊಬೈಲ್ ಹಾಗೂ 5,000 ರೂ. ನಗದು ದೋಚಿ ಪರಾರಿಯಾಗಿದ್ದು, ಈ ವಿಷಯವನ್ನು ಆರೋಪಿಗಳು ಒಪ್ಪಿಕೊಂಡಿದ್ದರು.
ಅಂದಿನ ಉಡುಪಿ ಇನ್‌ಸ್ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ 21 ಸಾಕ್ಷಿಗಳ ವಿಚಾರಣೆ ನಡೆದಿತ್ತು. ಪ್ಯಾಸಿಕ್ಯೂಷನ್ ಪರವಾಗಿ 53 ದಾಖಲಾತಿ ಹಾಗೂ 6 ಇತರ ವಸ್ತುಗಳನ್ನು ಗುರುತಿಸಲಾಗಿತ್ತು. ಸಾಕ್ಷಿದಾರರ ವಿಚಾರಣೆಯನ್ನು ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಸರಕಾರಿ ಅಭಿಯೋಜಕರಾದ ಶಾಂತಿಬಾಯಿ ನಡೆಸಿದ್ದರು.
ಪ್ರಕರಣ 2022ರ ಫೆಬ್ರವರಿಯಲ್ಲಿ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಯಾಯಿತು. ನ್ಯಾಯಾಧೀಶ ದಿನೇಶ್ ಹೆಗಡೆ ವಾದ-ಪ್ರತಿವಾದಗಳನ್ನು ಆಲಿಸಿ ಆರೋಪಿಗಳ ವಿರುದ್ಧದ ಆರೋಪಗಳು ರುಜುವಾತಾಗಿದೆ ಎಂದು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದರು.
ಶಿಕ್ಷೆಯ ವಿವರ :
ಆರೋಪಿಗಳ ವಿರುದ್ದ ಜೀವಾವಧಿ ಶಿಕ್ಷೆ, 7 ವರ್ಷ ಕಠಿನ ಸಜೆ, 7 ವರ್ಷ ಸಾದಾ ಸಜೆ ಹಾಗೂ 6 ತಿಂಗಳು ಶಿಕ್ಷೆ ವಿಧಿಸಲಾಗಿದ್ದು, ಏಕಕಾಲದಲ್ಲಿ ಅನುಭವಿಸುವಂತೆ ಆದೇಶಿಸಲಾಗಿದೆ.