Advertisement

ಪರಿಸರ ಕಾಪಾಡದಿದ್ದರೆ ಬದುಕಿಗೆ ಸಂಕಷ್ಟ; ಬಸವರಾಜ

05:23 PM Jun 30, 2023 | Team Udayavani |

ನರಗುಂದ: ಪರಿಸರದ ಬಗ್ಗೆ ಕಾಳಜಿ ವಹಿಸದಿದ್ದರೆ ನಾವು ಬದುಕುವುದು ಕಷ್ಟಕರವಾಗುತ್ತದೆ. ನಮ್ಮ ಆರೋಗ್ಯಕ್ಕೆ ನಮ್ಮ ಮನೆಯ ಸುತ್ತಲಿನ ಪರಿಸರ ಜಾಗೃತಿ ಮುಖ್ಯವಾಗಿದೆ. ನಾವು ಪ್ರಕೃತಿ ಉಳಿಸಿದರೆ ಪ್ರಕೃತಿ ನಮ್ಮನ್ನು ಉಳಿಸುತ್ತದೆ ಎಂದು ಎಸ್‌ಡಿಎಂಸಿ ಉಪಾಧ್ಯಕ್ಷ ಬಸವರಾಜ ಮಾದರ ಹೇಳಿದರು.

Advertisement

ತಾಲೂಕಿನ ಅರಿಷಿಣಗೋಡಿ ವಲಯದ ಕಿತ್ತೂರು ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌
ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹವಾಮಾನ ಬದಲಾವಣೆ, ಮಾಲಿನ್ಯ ಮತ್ತು ಜೀವ ವೈವಿಧ್ಯ ನಷ್ಟದಂತಹ ಅನೇಕ ಪರಿಸರ ಸಮಸ್ಯೆಗಳನ್ನು ಭೂಮಿ ಎದುರಿಸುತ್ತಿದೆ. ಈ ಸಮಸ್ಯೆಗಳು ಮಾನವ ಚಟುವಟಿಕೆಯಿಂದ ಉಂಟಾಗುತ್ತವೆ. ಅವು ಭೂಮಿಯ ಪರಿಸರ ವ್ಯವಸ್ಥೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ ಎಂದು ಹೇಳಿದರು.

ಕೃಷಿ ಮೇಲ್ವಿಚಾರಕ ಗುಡ್ಡಚಾರಿ ಅವರು ಪರಿಸರ ಜಾಗೃತಿ ಮತ್ತು ಪರಿಸರ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ
ಮಕ್ಕಳಿಗೆ ತಿಳಿಸಿದರು. ಅಲ್ಲದೇ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯ
ಕ್ರಮದ ಮೂಲಕ ಜಿಲ್ಲೆಯಲ್ಲಿ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.

ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದ ಮೂಲಕ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಬದಲಾವಣೆ ತರಲಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ಸಸಿ ನೆಡಲಾಯಿತು.

Advertisement

ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಿ, ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯ ನಾಗಪ್ಪ ಕಾವಳ್ಳಿ, ಶಾಲೆಯ ಮುಖ್ಯೋಪಾಧ್ಯಾಯ ಕೆ.ಆರ್‌.ಗೌಡರ, ದೀಪಾ ಗೋಣಬಾಲ, ಉಮೇಶ್‌ ಲಿಂಗದಾಳ, ಮಂಜುಳಾ ಚಂದರಗಿ, ವಿ.ವೈ.ಜಂಜಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next