ಕುಂದಾಪುರ: ಬೈಂದೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ರವಿ ಶೆಟ್ಟಿ ಅವರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ದುಬೈನಿಂದ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು ಫೀಲ್ಡಲ್ಲಿ ಸೈಲೆಂಟಾಗು..ಇಲ್‌ದಿದ್ರೆ ಮನೆಗೆ ಹೋಗಲ್ಲ ಎಂದು ಕರೆ ಮಾಡಲಾಗಿದೆ.
ಈ ಸಂಬಂಧ ರವಿ ಶೆಟ್ಟಿ ಅವರು ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ರವಿ ಅವರಿಗೆ ಗನ್‌ಮ್ಯಾನ್ ಭದ್ರತೆ ನೀಡಲಾಗಿದೆ.
ರವಿ ಶೆಟ್ಟಿ ಅವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಕಳೆದ 1 ವರ್ಷದಿಂದ ಕ್ಷೇತ್ರದ ಅಭ್ಯರ್ಥಿ ಎಂದು ಸಕ್ರೀಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಬೈಂದೂರು ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಗೋಪಾಲ್ ಪೂಜಾರಿ ಮತ್ತು ಬಿಜೆಪಿಯ ಸುಕುಮಾರ್ ಶೆಟ್ಟಿ ಅವರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ರವಿ ಅವರು 2 ಪಕ್ಷಗಳ ಮತ ವಿಭಜನೆಗೆ ಕಾರಣವಾಗಬಹುದು ಎಂದು ಅಂದಾಜಿಸಲಾಗಿದೆ.