Advertisement

ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ: ಡಿಜಿಪಿಗೆ ದೂರು

07:25 PM Jun 09, 2020 | keerthan |

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ ಪ್ರಿಯಾಂಕ್ ಖರ್ಗೆಯವರಿಗೆ ಅಪರಿಚಿತರು ಕರೆ ಮಾಡಿ ಜೀವಬೆದರಿಕೆ ಹಾಕಿದ್ದು, ಈ ಬಗ್ಗೆ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ದೂರು ನೀಡಲಾಗಿದೆ.

Advertisement

ಕಳೆದ ಭಾನುವಾರ ಮಲ್ಲಿಕಾರ್ಜುನ ಖರ್ಗೆಯವರ ಸದಾಶಿವ ನಗರದ ನಿವಾಸಕ್ಕೆ ರಾತ್ರಿ ದೂರವಾಣಿ ಕರೆ ಮಾಡಿ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವ ವಿಷಯ ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿದ್ದಾನೆ.

ಅದೇ ದಿನ ರಾತ್ರಿ ಒಂದು ಗಂಟೆ ಸುಮಾರಿಗೆ ಪ್ರಿಯಾಂಕ್ ಖರ್ಗೆಯವರಿಗೂ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜೀವ ಬೆದರಿಕೆ  ಹಾಕಲಾಗಿದೆ. ಈ ಬಗ್ಗೆ ಬೆದರಿಕೆ ಕರೆ ಮಾಡಿರಿವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next