Advertisement

ಸೌಂದರ್ಯ ಪ್ರಜ್ಞೆ ಇಲ್ಲದ ಜೀವನ ಬರಡು: ಮೋಹನ ಆಳ್ವ

01:30 AM Jan 17, 2019 | Harsha Rao |

ಗಂಗೊಳ್ಳಿ: ಸೌಂದರ್ಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಅದಿಲ್ಲದಿದ್ದರೆ ಜೀವನ ಬರಡಾಗುತ್ತದೆ ಎಂದು ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ ಆಳ್ವ ಹೇಳಿದರು.

Advertisement

ಹಸಿಮೀನು ವ್ಯಾಪಾರಸ್ಥರ ಸಂಘದ ದಶಮಾನೋತ್ಸವದ ಅಂಗವಾಗಿ ಗಂಗೊಳ್ಳಿ ಮೀನುಗಾರಿಕಾ ಬಂದರು ವಠಾರದಲ್ಲಿ ಸೋಮವಾರ ಸಂಜೆ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.
ಆಳ್ವಾಸ್‌ ನುಡಿಸಿರಿ ಕುಂದಾಪುರ ಘಟಕದ ಗೌರವಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. 

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಅಂಜನಾದೇವಿ, ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಕೆ.ನಾಗ ಖಾರ್ವಿ, ಪರ್ಸಿನ್‌ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ರಮೇಶ ಕುಂದರ್‌, ನುಡಿಸಿರಿ ಕುಂದಾಪುರ ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ ಶುಭಾಶಂಸನೆಗೈದರು. 

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆನಂದ ಸಿ. ಕುಂದರ್‌ ಅವರನ್ನು ಸಮ್ಮಾನಿಸಲಾಯಿತು. ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ ಆಳ್ವ ಅವರನ್ನು ಗೌರವಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಾದ ವಿಕೇಶ್‌ ಮೊಗವೀರ, ದರ್ಶನ್‌, ಗೌತಮಿ, ಅಕ್ಷತಾ, ಆದಿತ್ಯ ಮತ್ತು ರೋಷನ್‌ ಅವರನ್ನು ಅಭಿನಂದಿಸಲಾಯಿತು.

ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್‌.ಮಂಜು ಬಿಲ್ಲವ, ಕೊಂಕಣಿ ಖಾರ್ವಿ ಮಾರ್ಕೆಟಿಂಗ್‌ ಸಮಿತಿ ಅಧ್ಯಕ್ಷ ಸೌಪರ್ಣಿಕ ಬಸವ ಖಾರ್ವಿ, ಗಂಗೊಳ್ಳಿ ಟ್ರಾಲ್‌ ಬೋಟ್‌ ಯೂನಿಯನ್‌ ಅಧ್ಯಕ್ಷ ಪುರುಷೋತ್ತಮ ಆರ್ಕಾಟಿ ಮತ್ತಿತರರು ಉಪಸ್ಥಿತರಿದ್ದರು.

Advertisement

ಸಂಘದ ಅಧ್ಯಕ್ಷ ಮೋಹನ ಪಿ. ಖಾರ್ವಿ ಸ್ವಾಗತಿಸಿದರು. ಉಪನ್ಯಾಸಕ ನರೇಂದ್ರ ಎಸ್‌.ಗಂಗೊಳ್ಳಿ ಮತ್ತು ಸುಂದರ ಜಿ. ನಿರೂಪಿಸಿ, ವಂದಿಸಿದರು. ಆಳ್ವಾಸ್‌ ಸಾಂಸ್ಕೃತಿಕ ವೈಭವ ಜರಗಿತು.

Advertisement

Udayavani is now on Telegram. Click here to join our channel and stay updated with the latest news.

Next