Advertisement

Lift Collapse: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಕುಸಿದು 4 ಮಂದಿ ಮೃತ್ಯು

02:26 PM Sep 15, 2023 | Team Udayavani |

ಉತ್ತರ ಪ್ರದೇಶ: ಗ್ರೇಟರ್ ನೋಯ್ಡಾದ ಬಿಸ್ರಾಖ್ ಪ್ರದೇಶದ ಆಮ್ರಪಾಲಿ ವಸತಿ ಸಂಕೀರ್ಣದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಲಿಫ್ಟ್ ಕುಸಿದು ಕನಿಷ್ಠ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ಗೌರ್ ನಗರದಲ್ಲಿ ಆಮ್ರಪಾಲಿ ಬಿಲ್ಡರ್ಸ್‌ನಿಂದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ಧ ವೇಳೆ ಈ ದುರಂತ ನಡೆದಿದೆ ಎನ್ನಲಾಗಿದ್ದು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಇದನ್ನೂ ಓದಿ: Dandeli: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next