Advertisement
ನಿನ್ನೆಯಷ್ಟೇ ‘ಲೈಗರ್’ ಸಿನಿಮಾದ ಬಿಡುಗಡೆ ದಿನಾಂಕವನ್ನು ತಿಳಿಸುವುದಾಗಿ ಹೇಳಿದ್ದ ಚಿತ್ರತಂಡ ಇದೀಗ ಚಿತ್ರದ ಬಿಡುಗಡೆ ದಿನಾಂಕವನ್ನು ಫೈನಲ್ ಮಾಡಿದೆ. ಈ ಕುರಿತಾಗಿ ತಮ್ಮ ಇನ್ ಸ್ಟಾಗ್ರಾಂ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ನಟ ವಿಜಯ್ ದೇವರಕೊಂಡ, ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 9 ರಂದು ನಾವು ಬರುತ್ತಿದ್ದೇವೆ ಎಂದು ತಿಳಿಸಿದ್ದಾರೆ.
Related Articles
Advertisement
ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿರುವ ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿದ್ದು, ಮನಿ ಶರ್ಮಾ ಸಂಗೀತ ನಿರ್ದೇಶನ ಮಾಡಿದ್ದಾರೆ.