ಜೈಪುರ: ಗುಡುಗು ಮಿಂಚಿನ ಆಘಾತಕ್ಕೆ 20 ಮಂದಿ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಜಸ್ಥಾನದಲ್ಲಿ ರವಿವಾರ ನಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಸಂತಾಪ ಸೂಚಿಸಿದ್ದಾರೆ.
ರಾಜಸ್ಥಾನದ ಜೈಪುರ ಸೇರಿದಂತೆ ಹಲವು ಪಟ್ಟಣಗಳಲ್ಲಿ ಮಿಂಚಿನ ಆಘಾತಕ್ಕೆ ಜನರ ಸಾವನ್ನಪ್ಪಿದ್ದಾರೆ. ಜೈಪುರದಲ್ಲಿ 11 ಮಂದಿ, ಧೋಲಾಪುರದಲ್ಲಿ ಮೂವರು, ಕೋಟಾದಲ್ಲಿ ನಾಲ್ವರು ಮತ್ತು ಝಲ್ವಾರ್ ಹಾಗೂ ಬರಾನ್ ನಲ್ಲಿ ತಲಾ ಒಬ್ಬರು ಮಿಂಚಿನ ಆಘಾತಕ್ಕೆ ಬಲಿಯಾಗಿದ್ದಾರೆ.
ಇದನ್ನೂ ಓದಿ:ಇಬ್ಬರು ಉಗ್ರರ ಬಂಧನ, ಭಾರೀ ಸಂಚು ವಿಫಲ: ಉ.ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ
ಭಾನುವಾರ ಒಟ್ಟು 17 ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಜಂಟಿ ತಂಡಗಳು ರಕ್ಷಿಸಿವೆ. ಗಾಯಾಳುಗಳನ್ನು ಜೈಪುರದ ಸವಾಯಿ ಮನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಮಿಂಚಿನಿಂದಾಗಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದು ತುಂಬಾ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.