Advertisement

ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿ ಸಾಧ್ಯತೆ : ಸಚಿವ ಅಶೋಕ

07:11 PM Aug 13, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಮೂರನೇ ಅಲೆಯ ಅವಲೋಕನ ಹಾಗೂ ಸೋಂಕು ತಡೆಯಲು ಕೈಗೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ( ಶನಿವಾರ) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರ ಜೊತೆ ಮಹತ್ವದ ಸಭೆ ಕರೆದಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಅವರು ತಿಳಿಸಿದ್ದಾರೆ.

Advertisement

ಇಂದು ( ಆ.14) ಮಾಧ್ಯಮಗಳ ಎದುರು ಮಾತನಾಡಿರುವ ಸಚಿವರು, ಬಹುಶಃ ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎಂದರು.

ಇನ್ನು ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಶಾಲೆಗಳು ಇದೆ 23 ರಂದು ಆರಂಭಿಸುವುದಾಗಿ ಸರ್ಕಾರ ಘೋಷಿಸಿದೆ. ಆದರೆ, ಕೋವಿಡ್ ಮೂರನೇ ಅಲೆಯ ಭೀತಿ ಶುರುವಾಗಿದೆ. ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ.

ಈಗಾಗಲೇ ಉಡುಪಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ‘ವಾತ್ಸಲ್ಯ’ ಯೋಜನೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಮಕ್ಕಳು ಎಲ್ಲಾ ರೀತಿಯ ಆರೋಗ್ಯ ತಪಾಸಣೆಗೆ ಒಳಗಾಗಬಹುದು. ಇದರಲ್ಲಿ ಮಕ್ಕಳ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು ಕೂಡಾ ಒಳಗೊಂಡಿದೆ. ಯೋಜನೆಯಲ್ಲಿ ಕೆಲಸ ಮಾಡುವ ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ನಾವು ತರಬೇತಿ ನೀಡಿದ್ದೇವೆ ಮತ್ತು ಈ ವೈರಸ್‌ನಿಂದ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುತ್ತೇವೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೆ ಮಕ್ಕಳ ಐಸಿಯು ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ ಎಂದು ಸಚಿವ ಅಶೋಕ್ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next