Advertisement
ಆಳುವವರಿಗೆ ಘೋಷಣೆ ಮತ್ತು ಅನುಷ್ಠಾನದ ಮಧ್ಯೆ ವ್ಯತ್ಯಾಸ ಕಾಣುತ್ತಿಲ್ಲ, ಹಾಗಾಗಿಯೇ ಕಳೆದೊಂದು ದಶಕದ ಹಿಂದೆ ಆರಂಭವಾದ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ಬಿಕೆಡಿಬಿ) ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದರೂ ಸರ್ಕಾರ ಮಾತ್ರ ಕ್ಯಾರೆ ಎನ್ನುತ್ತಿಲ್ಲ.
ಕೈಗೆತ್ತಿಕೊಳ್ಳಲಾದ 29 ಶರಣ ಸ್ಮಾರಕಗಳ ಪೈಕಿ ಇದು ವರೆಗೆ ಪೂರ್ಣಗೊಂಡಿದ್ದು 17 ಸ್ಮಾರಕಗಳು ಮಾತ್ರ.
Related Articles
Advertisement
ಇನ್ನೂ 12 ಶರಣ ತಾಣಗಳಾದ ಪರುಷ ಕಟ್ಟೆ, ಬಸವಕಲ್ಯಾಣ ಕೋಟೆ, ವಿಜ್ಞಾನೇಶ್ವರಗವಿ, ಪಂಚ ಸೂತ್ರ ಗವಿ, ಅನುಭವಮಂಟಪ, ಶಿವಪುರ ಶಿವಾಲಯ, ನಾರಾಯಣಪುರ ಶಿವಾಲಯ, ಕಿನ್ನರಿ ಬೊಮ್ಮಯ್ಯ ಗುಡಿ, ಮೊಳಿಗೆ ಮಾರಯ್ಯ ಗುಡಿ, ಸದಾನಂದ ಮಠ, ಬಸವೇಶ್ವರ ಮಹಾಮನೆ ಇದ್ದ ಸ್ಥಳ ಅರಿವಿನ ಮನೆ, ಯಳೆಹೊಟ್ಟೆ ಶಿಕ್ಷೆ ಅನುಭವಿಸಿದ ಶರಣರ ಸ್ಥಳಗಳ ಅಭಿವೃದ್ಧಿ ಕಾರ್ಯ ನಿಂತು ಹೋಗಿದೆ. 2005ರಲ್ಲಿ ಆರಂಭವಾದ ಕಾಮಗಾರಿ ದಶಕಕ್ಕಿಂತ ಹೆಚ್ಚು ವರ್ಷಗಳಾದರೂ ಹೇಳಿಕೊಳ್ಳುವ ಪ್ರಗತಿ ಕಂಡಿಲ್ಲ. ಸ್ಮಾರಕಗಳ ಕಾಮಗಾರಿಗಳ ಪೈಕಿಯೇ ಅರ್ಧ ಕಾಮಗಾರಿ ಬಾಕಿ ಉಳಿದಿದೆ. ಈ ಮಧ್ಯೆ ಮತ್ತೆ ಅನುಭವ ಮಂಟಪ ಪುನರ್ ನಿರ್ಮಾಣಕ್ಕಾಗಿ ಗೋ. ರು. ಚನ್ನಬಸಪ್ಪ ಅವರ ನೇತೃತ್ವದಲ್ಲಿ ರಚಿಸಿದ ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸುಮಾರು ರೂ. 600 ಕೋಟಿಗಳ ಯೋಜನೆ ತಯಾರಿಸಲಾಗಿದೆ. ಬಿಕೆಡಿಬಿ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಗಳು ಬಸವಕಲ್ಯಾಣಕ್ಕೆ ಬಂದು ಇಲ್ಲಿಯೇ ಸಭೆ ನಡೆಸಿ ನೂತನ ಅನುಭವ ಮಂಟಪಕ್ಕೆ ಅನುಮೋದನೆ ನೀಡುವ ಜತೆಗೆ ಭೂಮಿ ಪೂಜೆ ನೆರವೇರಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಡಿ.13ರಂದು ಸಾಧನಾ ಸಮಾವೇಶದ ನಿಮಿತ್ತ ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಕಾರ್ಯಕ್ರಮಗಳಲ್ಲಿ ಬಿಕೆಡಿಬಿ ಸಭೆ
ನಡೆಸುವುದು ಹಾಗೂ ಅನುಭವ ಮಂಟಪ ನಿರ್ಮಾಣ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲದಿರುವುದು ಬಸವ ಭಕ್ತರಲ್ಲಿ ನಿರಾಸೆ ಮೂಡಿಸುವಂತಾಗಿದೆ. ಅನುಭವ ಮಂಟಪ ನಿರ್ಮಾಣಕ್ಕೆ ಕೂಡಲೆ ಆಡಳಿತಾತ್ಮಕ ಅನುಮೋದನೆ ನೀಡುವ ಜತೆಗೆ ಇನ್ನು ಅಭಿವೃದ್ದಿಗೊಳ್ಳದಿರುವ 12 ಶರಣ ಸ್ಮಾರಕಗಳ ಅಭಿವೃದ್ಧಿಗೆ ಅಗತ್ಯವಿರುವ 119 ಕೋಟಿ ರೂ. ಅನುದಾನ ಕಲ್ಪಿಸಿ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಿಂದ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಬಿಕೆಡಿಬಿ ಯಿಂದ ನಗರದ ರಥ ಮೈದಾನದಲ್ಲಿ ನಿರ್ಮಿಸಲಾದ ನೂತನ ಸಭಾಭವನವು ಸುಮಾರು 6000 ಆಸನ ಸಾಮರ್ಥ್ಯಹೊಂದಿದ್ದು, 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳಿಸಲಾಗಿದೆ. ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆಗೆಂದು ಬುಧವಾರ ನಗರಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭಾಭವನ ಲೋಕಾರ್ಪಣೆಗೊಳಿಸುವರು. ಉದಯಕುಮಾರ ಮುಳೆ