Advertisement

ಭಾಗಶಃ ಭರ್ತಿಯಾದ ಲಿಂಗನಮಕ್ಕಿ ಜಲಾಶಯ

11:06 AM Sep 03, 2019 | Suhan S |

ಶಿವಮೊಗ್ಗ: ನಿರಂತರ ಮಳೆಯಿಂದ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ಭಾಗಶಃ ಭರ್ತಿಯಾಗಿದೆ ಎಂದು ವರದಿ ತಿಳಿಸಿದೆ.

Advertisement

ಕಳೆದ ಕೆಲ ದಿನಗಳ ನಿರಂತರವಾಗಿ ಸುರಿದ ಮಳೆಯ ಪರಿಣಾಮ 1819 ಅಡಿ ಎತ್ತರವಿರುವ ಲಿಂಗನಮಕ್ಕಿ ಜಲಾಶಯ ಭಾಗಶಃ 1818.90 ಅಡಿಯಷ್ಟು ಭರ್ತಿಯಾಗಿದೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದಿಂದ 45 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. ಜಲಾಶಯದ 11 ಕ್ರಸ್ಟ್ ಗೇಟುಗಳನ್ನು ಒಂದೂವರೆ ಅಡಿಯಷ್ಟು ಎತ್ತಿ ನದಿಗೆ 45 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.

ಜಲಾಶಯದಿಂದ ಶರಾವತಿ ನದಿಗೆ ನೀರು ಬಿಟ್ಟಿರುವುದರಿಂದ ಮೈದುಂಬಿರುವ ವಿಶ್ವ ವಿಖ್ಯಾತ ಜೋಗ ಜಲಪಾತ ಮನಮೋಹಕವಾಗಿ ಕಾಣುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next