Advertisement

ಲಿಂಗನಮಕ್ಕಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ: ಮುನ್ನಚ್ಚರಿಕೆ

09:15 AM Aug 11, 2019 | Sriram |

ಶಿವಮೊಗ್ಗ: ಶರಾವತಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯನ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿದೆ.

Advertisement

ಲಿಂಗನಮಕ್ಕಿ ಜಲಾಶಯದ ಒಳಹರಿವು ಸುಮಾರು 1,43,397 ಕ್ಯೂಸೆಕ್ಸ್‌ ಆಗಿರುತ್ತದೆ. ಇದೇ ರೀತಿ ಜಲಾಶಯಕ್ಕೆ ನೀರಿನ ಒಳ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಲಿಂಗನಮಕ್ಕಿ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು.

ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ಎಲ್ಲ ನೀರು ಗೇರುಕೊಪ್ಪ ಜಲಾಶಯಕ್ಕೆ ಹರಿದು ಬರುತ್ತದೆ.ಗೇರು ಕೊಪ್ಪ ಜಲಾಶಯವು ನೀರಿನ ಸಂಗ್ರಹವನ್ನು ಗರಿಷ್ಠ ಮಟ್ಟದಲ್ಲಿ ಕಾಪಾಡುವ ಜಲಾಶಯವಾದ್ದರಿಂದ ಲಿಂಗನಮಕ್ಕಿ ಜಲಾಶಯದಿಂದ ಹೆಚ್ಚುವರಿಯಾಗಿ ಹೊರಬಿಟ್ಟ ನೀರನ್ನು ಸಂಗ್ರಹಿಸುವ ಅವಕಾಶವಿರುವುದಿಲ್ಲ.

ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ ಜಾನುವಾರುಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಈ ಮೂಲಕ ಎಚ್ಚರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next