Advertisement

ಕೃಷ್ಣಾ ನದಿಗೆ 1.80 ಲಕ್ಷ ನೀರು; ಲಿಂಗಸೂಗುರಿನ ಶೀಲಹಳ್ಳಿ ಸೇತುವೆ ಮುಳುಗಡೆ

02:08 PM Aug 07, 2020 | keerthan |

ರಾಯಚೂರು: ಕೃಷ್ಣ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಹರಿಸಿದ ಪರಿಣಾಮ ರಾಯಚೂರಿನ ಲಿಂಗಸೂಗುರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.

Advertisement

ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.  ಶುಕ್ರವಾರ 1.60 ಲಕ್ಷ ಕ್ಯೂಸೆಕ್ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ನಾರಾಯಣಪುರ ಜಲಾಶಯದಿಂದ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

ಒಂದೂವರೆ ಲಕ್ಷ ಕ್ಯೂಸೆಕ್ ನೀರು ಹರಿದಲ್ಲಿ ಶೀಲಹಳ್ಳಿ ಸೇತುವೆ ಮುಳುಗಡೆಯಾಗುತ್ತದೆ. ಇನ್ನೂ ದೇವದುರ್ಗ ತಾಲೂಕಿನ ಹೂವಿನ ಹೆಡಗಿ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.  ಸೇತುವೆ ಮೇಲೆ ಯಾರು ಓಡಾಟದಂತೆ ಪೊಲೀಸ್ ಬಂದೋ‌ಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ನದಿಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಕೂಡ ನೆರೆ ಕುರಿತು ಸಭೆ ಕೈಗೊಂಡಿದ್ದು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next