Advertisement

ಸಮರ್ಪಕ ನೀರು ಪೂರೈಕೆಗೆ ಕ್ರಮ

03:32 PM Jun 26, 2020 | Naveen |

ಲಿಂಗಸುಗೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕುಡಿವ ನೀರು ಸರಬರಾಜಿನಲ್ಲಿ ತೊಂದರೆ ಆಗಿದೆ. ಶೀಘ್ರವೇ ಕೆರೆಗಳನ್ನು ತುಂಬಿಸಿ ನೀರು ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

Advertisement

ಪಟ್ಟಣದ ಕುಡಿಯುವ ನೀರಿನ ಕೆರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೆರೆಯಲ್ಲಿ ನೀರು ತಳ ಕಂಡಿದ್ದು ಸಕಾಲಕ್ಕೆ ಕೆರೆ ತುಂಬಿಸಿಕೊಳ್ಳಲು ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಈಗಾಗಲೇ ರಾಂಪುರ ಏತ ನೀರಾವರಿ ನಾಲೆಗಳ ಮೂಲಕ ಕೆರೆ ತುಂಬಿಸಲು ಕ್ರಮ ಜರುಗಿಸಲಾಗಿದೆ. ಅದರಂತೆ ಕೆಲಸವು ಪ್ರಗತಿಯಲ್ಲಿದೆ. ನೂರಾರು ಎಕರೆ ವಿಸ್ತೀರ್ಣದಲ್ಲಿ ಕೆರೆ ಅಭಿವೃದ್ಧಿಪಡಿಸುವ ಜೊತೆಗೆ ಕೆರೆ ಒಡ್ಡಿಗೆ ಸಿಮೆಂಟ್‌ ಕಾಂಕ್ರೀಟ್‌ ಹಾಕಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಕುಡಿವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ಕೆರೆಯಲ್ಲಿನ ಹೂಳು ತೆಗೆಯಲಾಗುವುದು. ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಆದರ ಸದ್ಯ ಕೆರೆ ತುಂಬಿಸಲು ಪ್ರಥಮಾದ್ಯತೆ ನೀಡಲಾಗುವುದು ಎಂದು ಹೇಳಿದರು. ಕೆರೆ ಕುಡಿಯುವ ನೀರು ಯೋಜನೆಯಿಂದ ಪಟ್ಟಣಕ್ಕೆ ನಿತ್ಯ ನೀರು ಪೂರೈಸಬೇಕು. ಆದರೆ ಕೆರೆಯಲ್ಲಿ ಹೂಳು ತುಂಬಿದ್ದು, ಹೂಳು ತೆರವುಗೊಳಿಸಿದರೆ ಸಮರ್ಪಕ ನೀರು ಪೂರೈಕೆ ಸಾಧ್ಯವಾಗಲಿದೆ. ಲಿಂಗಸುಗೂರು ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಕೆರೆಯಲ್ಲಿ ಹೂಳು ತೆಗೆಸುವಂತೆ ಮಾಜಿ ಶಾಸಕ ಮಾನಪ್ಪ ವಜ್ಜಲ್‌ ವಿನಂತಿಸಿದರು.

ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಿ.ಎಸ್‌. ಹೂಲಗೇರಿ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್‌, ತಾಲೂಕು ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೂಪನಗೌಡ ಕರಡಕಲ್‌, ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್‌ ಚಾಮರಾಜ ಪಾಟೀಲ್‌, ಪುರಸಭೆ ಮುಖ್ಯಾಧಿಕಾರಿ ಕೆ.ಮುತ್ತಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next