Advertisement

2 ಸಾವಿರ ಹುದ್ದೆ ಶೀಘ್ರ ಭರ್ತಿಗೆ ಕ್ರಮ

01:10 PM Aug 28, 2019 | Naveen |

ಲಿಂಗಸುಗೂರು: ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಎರಡು ಸಾವಿರ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಶೀಘ್ರ ನೇಮಕಾತಿ ಮಾಡಲಾಗುವುದು ಎಂದು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಾಹೀರಾ ನಸೀಮ್‌ ಹೇಳಿದರು.

Advertisement

ಪಟ್ಟಣದಲ್ಲಿ ಮಂಗಳವಾರ ಹೊಸ ಬಸ್‌ ನಿಲ್ದಾಣ ಕಾಮಗಾರಿ ಹಾಗೂ ಸಾರಿಗೆ ಘಟಕ ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಸ್ಥೆಯ ವ್ಯಾಪ್ತಿಯಲ್ಲಿ ಎಲ್ಲ ಘಟಕಗಳಿಗೆ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕ ಪ್ರಕ್ರಿಯೆ ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ನಿಟ್ಟಿನಲ್ಲಿ ಬಸ್‌ಗಳ ಸಂಖ್ಯೆ ಹೆಚ್ಚಿಸಲು ತಿರ್ಮಾನಿಸಲಾಗಿದೆ. 150 ಹೊಸ ಬಸ್‌ಗಳನ್ನು ಖರೀದಿಸಲಾಗುವುದು. ಹಲವೆಡೆ ಹೊಸ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿ ಸಾಗಿದೆ ಎಂದರು.

ಸ್ವಚ್ಛತೆ ಕಾಪಾಡಲು ಸೂಚನೆ: ಪಟ್ಟಣದ ಸಾರಿಗೆ ಘಟಕಕ್ಕೆ ಭೇಟಿ ನೀಡಿದ್ದ ಅವರು, ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಿಬ್ಬಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶುದ್ಧ ನೀರಿನಿಂದ ಬಸ್‌ ತೊಳೆಯಬೇಕು. ಸಿಬ್ಬಂದಿಗಳಿಗೆ ಗ್ಲೌಜ್‌, ಮಾಸ್ಕ್ ನೀಡಬೇಕು ಹಾಗೂ ಸ್ವಚ್ಛತೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಿ ಎಂದು ಘಟಕದ ವ್ಯವಸ್ಥಾಪಕ ಪ್ರಕಾಶ ದೊಡ್ಡಮನಿಗೆ ಸೂಚಿಸಿದರು.

ಕಲಬುರಗಿ ವಿಭಾಗದ ಸಿಟಿಎಂ ಕೊಟ್ರೇಶ, ಡಿಟಿಒ ರಾಜೇಂದ್ರ ಜಾದವ, ರಾಯಚೂರು ಜಾಗೃತಿ ದಳ ಅಧಿಕಾರಿ ನಜೀರ್‌ ಅಹ್ಮದ, ಗುತ್ತಿಗೆದಾರ ಆದಪ್ಪ ಮನಗೂಳಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next