Advertisement

ಅಂಗವಿಕಲರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಿ

04:42 PM May 15, 2020 | Naveen |

ಲಿಂಗಸುಗೂರು: ಲಾಕ್‌ಡೌನ್‌ ಸಮಯದಲ್ಲಿ ಅಂಗವಿಕಲರು ವಿವಿಧ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್‌ ಘೋಷಣೆಗೆ ಆಗ್ರಹಿಸಿ ವಿಕಲಚೇತನರ ಆರ್‌ಪಿಡಿ ಟಾಸ್ಕ್ಫೋರ್ಸ್‌ ಸಮಿತಿ ಪದಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

Advertisement

ಅಂಗವಿಕಲರಿಗೆ ಎರಡು ತಿಂಗಳು ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಆದರೆ ಈವರಿಗೂ ಎರಡು ತಿಂಗಳ ಮಾಸಾಶನ ಬಿಡುಗಡೆ ಮಾಡಿಲ್ಲ. ಇದರಿಂದ ಅಂಗವಿಕಲರಿಗೆ ಔಷಧ ಹಾಗೂ ದಿನ ಬಳಕೆ ಖರೀದಿಗಾಗಿ ತೊಂದರೆಯಾಗಿದೆ. ತಾಲೂಕು ಆಡಳಿತದಿಂದ ಆಹಾರ ಕಿಟ್‌ ವಿತರಣೆ ಸಂದರ್ಭದಲ್ಲಿ ಅಂಗವಿಕಲರನ್ನು ಪರಿಗಣಿಸಿಲ್ಲ. ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಆದ್ದರಿಂದ ಅಂಗವಿಕಲರಿಗಾಗಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಹಾಗೂ 5 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಸಿಎಂಗೆ ಬರೆದ ಮನವಿಯನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಿದರು.

ಸಮಿತಿ ತಾಲೂಕು ಅಧ್ಯಕ್ಷ ನಿಂಗನಗೌಡ ಮಾಚಕನೂರು, ಸುರೇಶ ಭಂಡಾರಿ, ಬಾಲಪ್ಪ ಕಡದಾಳ, ವೀರಭದ್ರಪ್ಪ ಗೆಜ್ಜಲಗಟ್ಟಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next