Advertisement

ಲಿಂಗಸುಗೂರಿನಲ್ಲೂ ಅಗತ್ಯ ಸಿದ್ಧತೆ

04:42 PM Jun 17, 2020 | Naveen |

ಲಿಂಗಸುಗೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯು ಇಂಗ್ಲಿಷ್‌ ವಿಷಯದ ಪರೀಕ್ಷೆ ಜೂನ್‌ 18ರಂದು ನಡೆಯಲಿದ್ದು, ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ.

Advertisement

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜು, ವಿಸಿಬಿ ಕಾಲೇಜು, ಸಂಗಮೇಶ್ವರ ಪಿಯು ಕಾಲೇಜು, ಮುದಗಲ್‌ನ ಸರ್ಕಾರಿ ಪಿಯು ಕಾಲೇಜು, ಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಸೇರಿ 6 ಪರೀಕ್ಷೆ ಕೇಂದ್ರ ತೆರೆಯಲಾಗಿದೆ. 3310 ವಿದ್ಯಾರ್ಥಿಗಳು ತಾಲೂಕಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದವರಾಗಿದ್ದು, ಮೂವರು ವಿದ್ಯಾರ್ಥಿಗಳು ಮಾತ್ರ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು 3313 ವಿದ್ಯಾರ್ಥಿಗಳು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸಮಾಜಿಕ ಅಂತರದಲ್ಲಿ ಕುಳಿತುಕೊಂಡು ಪರೀಕ್ಷೆ ಬರೆಸಲಾಗುತ್ತಿದೆ. ಥರ್ಮಲ್‌ ಸ್ಕ್ಯಾನಿಂಗ್‌ ಮತ್ತು ಸ್ಯಾನಿಟೈಸರ್‌ ಬಳಸಲಾಗುವುದು. ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಆದರೂ ಒಂದು ವೇಳೆ ಮರೆತು ಬಂದರೆ 200 ಮಾಸ್ಕ್ ತರಿಸಲಾಗಿದೆ ಎಂದು ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಮುರುಗೇಂದ್ರಪ್ಪ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next