Advertisement
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡಲು ಮಾತೆ ಮಹಾದೇವಿ, ಬಸವಣ್ಣನ ಅನುಯಾಯಿಗಳು, ವೀರಶೈವ ಮಹಾಸಭಾ ದವರು ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡಿ ಕೊಂಡಿದ್ದಾರೆ. ವಿರಕ್ತಮಠಗಳ ಸ್ವಾಮಿಗಳು, ವೀರಶೈವ ಸಮಾಜದ ಮುಖಂಡರು ಈ ಬಗ್ಗೆ ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗುವುದು. ಆದರೆ, ಕೆಲವರು ವೀರಶೈವ- ಲಿಂಗಾಯತ ಎಂದು ಸಿದ್ದರಾಮಯ್ಯ ಸಮಾಜವನ್ನು ಒಡೆಯುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದರು. Advertisement
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು
08:00 AM Aug 13, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.