Advertisement
ತಜ್ಞರ ಸಮಿತಿ ನೇಮಕಗೊಳಿಸಿ ರಾಜ್ಯ ಅಲ್ಪ ಸಂಖ್ಯಾತ ಆಯೋಗ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಂ. ಸತೀಶ್ ಸೇರಿ ಇತರರಿಂದ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ನ್ಯಾ. ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಜ್ಞರ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿ ನೀಡಿದ್ದು ಸಂಪುಟದಲ್ಲಿ ಚರ್ಚೆ ನಡೆಸಿದೆ. ಒಂದು ವೇಳೆ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸರ್ಕಾರ ಒಪ್ಪಿಗೆ ನೀಡುವುದು ಅಥವಾ ಕೇಂದ್ರಕ್ಕೆ ಶಿಫಾರಸು ಮಾಡಿದರೆ, ರಾಜ್ಯದಲ್ಲಿ ಸಾಮಾಜಿಕ ಸಂಘರ್ಷ ಉಂಟಾಗಲಿದೆ.ಹೀಗಾಗಿ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ನಿರ್ದೇಶಿಸುವಂತೆ ನ್ಯಾಯಪೀಠಕ್ಕೆ ಕೋರಿದರು.