Advertisement
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 35 ವರ್ಷಗಳಿಂದ ಅಖಿಲ ಭಾರತ ವೀರಶೈವ ಮಹಾಸಭಾದವರು ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಮುಂದಾಗಿದ್ದರು. ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆದು ಕುಲಶಾಸ್ತ್ರೀಯ ಅಧ್ಯಯನ,ಕಾನೂನು ಪಂಡಿತರ ಅಭಿಪ್ರಾಯ ಹಾಗೂ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಗಮನಕ್ಕೆ ತೆಗೆದುಕೊಂಡ ನಂತರ ಕೇಂದ್ರ ಸರಕಾರಕ್ಕೆ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರಕಾರ ಶಿಫಾರಸ್ಸು ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ,ಶಾಸಕ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಯುವಮುಖಂಡ ಸಾಗರ ಮುನವಳ್ಳಿ ಇದ್ದರು.