Advertisement

ಹಿಂದೂ ಧರ್ಮಕ್ಕಿಂತ ಲಿಂಗಾಯತ  ಸಂಪೂರ್ಣಭಿನ್ನ: ಆಕ್ಷೇಪಣೆ ಸಲ್ಲಿಕೆ

10:45 AM Mar 16, 2018 | Team Udayavani |

ಬೆಂಗಳೂರು: ಇಷ್ಟಲಿಂಗ ಪೂಜಿಸುವ ಪ್ರತಿಪಾದಿಸುವ ಏಕೈಕ ಧರ್ಮ ಲಿಂಗಾಯತವಾಗಿದ್ದು, ಹಿಂದೂ ಧರ್ಮಕ್ಕಿಂತ ಸಂಪೂರ್ಣ ಭಿನ್ನವಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾಕ ಇಲಾಖೆ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ಸ್ವತಂತ್ರ ಲಿಂಗಾಯತ ಧರ್ಮ ಮಾನ್ಯತೆ ಶಿಫಾರಸಿಗೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ ನಾಲ್ಕು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಗುರುವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ|ಬಿ.ಎಂ ಶ್ಯಾಮ್‌ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠಕ್ಕೆ, ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ಈ ಅಂಶಗಳನ್ನು ಉಲ್ಲೇಖೀಸಿದೆ.

Advertisement

ಹಿಂದೂ ಧರ್ಮದಲ್ಲಿ ಮೂರ್ತಿ ಪೂಜೆ ಮಾಡಲಾಗುತ್ತದೆ. ಲಿಂಗಾಯತ ಧರ್ಮದಲ್ಲಿ ಇಷ್ಟಲಿಂಗವನ್ನು ಪೂಜಿಸಲಾಗುತ್ತದೆ. ಬಸವಣ್ಣ ವೇದ ಹಾಗೂ ಆಗಮ ಶಾಸ್ತ್ರದಿಂದ ದೂರ ಉಳಿದುಕೊಂಡಿದ್ದರು. ಲಿಂಗಾಯತ ಧರ್ಮದ ವಿಚಾರಗಳು ಸಂಪೂರ್ಣ ಭಿನ್ನವಾಗಿವೆ. ಯಾವುದೇ ಜಾತಿ ಬೇಧ ಮಾಡುವುದಿಲ್ಲ. ವಿಧವಾ ಪುನರ್‌ವಿವಾಹಕ್ಕೆ ಹಿಂದೂ ಧರ್ಮದಲ್ಲಿ ಅವಕಾಶವಿಲ್ಲ. ಈ ಎಲ್ಲ ಅಂಶಗಳನ್ನು ಉಲ್ಲೇಖೀಸಿದ್ದು ಸ್ವತಂತ್ರ ಲಿಂಗಾಯತ ಧರ್ಮ ಮಾನ್ಯತೆ ನೀಡಬಹುದು ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಅಕ್ರಂ ಪಾಷಾ ಆಕ್ಷೇಪಣೆ ಸಲ್ಲಿಸಿದರು. ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರಕರಣದ ವಿಚಾರಣೆಯನ್ನು ನ್ಯಾಯಪೀಠ ಎ.3ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next