ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸು ಮಾಡುವ ಸಿಎಂ ಬಿಎಸ್‌ವೈ ಪ್ರಸ್ತಾವಕ್ಕೆ ಬಿಜೆಪಿ ವರಿಷ್ಠರಿಂದ ತಾತ್ಕಾಲಿಕ ತಡೆ ಬಿದ್ದಿದೆ.
ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಗಾಗಿ ಶಿಫಾರಸು ಮಾಡಿದರೆ ಇತರ ಸಮುದಾಯಗಳ ಆಕ್ರೋಶಕ್ಕೆ ಗುರಿಯಾಗ ಬಹುದು. ರಾಜಕೀಯವಾಗಿಯೂ ಹಿನ್ನಡೆ ಯುಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಸಮಗ್ರವಾಗಿ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳಿ ಎಂದು ವರಿಷ್ಠರು ಸಿಎಂಗೆ ಸೂಚಿಸಿ ದ್ದರಿಂದ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿದ್ದ ಈ ಪ್ರಸ್ತಾವವನ್ನು ಮುಂದೂಡಲಾಗಿದೆ.
ಶುಕ್ರವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿದ ಅಮಿತ್ ಶಾ, ಈ ಕುರಿತು ಚರ್ಚಿಸಿ. ತರಾತುರಿ ತೀರ್ಮಾನ ಬೇಡ ಎಂದು ಕಿವಿಮಾತು ಹೇಳಿದರು.
ಇತ್ತ ಬಿಜೆಪಿ ಸರಕಾರ ರಚನೆಗಾಗಿ ತ್ಯಾಗ ಮಾಡಿದ ಎಚ್. ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬೆಂಗಳೂರಿನಲ್ಲಿ ಕುರುಬ ಸಮುದಾಯದ ಸ್ವಾಮೀಜಿಗಳು, ಸಚಿವಾಕಾಂಕ್ಷಿಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಒತ್ತಾಯಿಸಿದರು. ಅತ್ತ ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ ಅವರು ಎಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಬೇಕು ಎಂದಿರುವುದು ಸ್ಥಾನಮಾನ ಸಿಗುವುದು ಅನುಮಾನ ಎಂಬಂತಿದೆ.
ಪೂಜಾ ಕಾರ್ಯಕ್ರಮದ ಬಳಿಕ ದಿಲ್ಲಿಯಲ್ಲಿ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಪೂಜೆಗೆ ಎಲ್ಲ ಶಾಸಕರು, ಪದಾಧಿಕಾರಿಗಳನ್ನು ಆಹ್ವಾನಿಸಿದ್ದೆ. ಸಿಎಂ ಹಾಗೂ ರಾಜ್ಯಾಧ್ಯಕ್ಷರು ಬರಲು ಸಾಧ್ಯವಾಗದಿರುವ ಬಗ್ಗೆ ಮೊದಲೇ ತಿಳಿಸಿ ಶುಭ ಕೋರಿದ್ದರು ಎಂದರು.